ಪ್ರಧಾನಿ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಾತುಕತೆಯ ನಂತರ, ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಅಮೆರಿಕವು ಶೇ. 50 ರಿಂದ ಶೇ. 18ಕ್ಕೆ ಇಳಿಸಿದೆ. ಇದರಲ್ಲಿ ರಷ್ಯಾ ತೈಲ ಖರೀದಿಯ ಕಾರಣಕ್ಕೆ ಹೇರಲಾಗಿದ್ದ ಶೇ. 25ರಷ್ಟು ದಂಡನಾತ್ಮಕ ಸುಂಕದ ರದ್ದತಿಯೂ ಸೇರಿದೆ. ಆದರೆ, ಈ ರಿಯಾಯಿತಿಯು ಭಾರತದ ಸ್ವತಂತ್ರ ವಿದೇಶಾಂಗ ನೀತಿಯ ಮೇಲೆ ಪ್ರಭಾವ ಬೀರದು ಎಂಬುದು ಜೈಶಂಕರ್ ಸ್ಪಷ್ಟಪಡಿಸಿದ್ದಾರೆ,(ಏಜೆನ್ಸೀಸ್).