ಇಂದೋರ್: ದೇವಿ ಅಹಲ್ಯಾ ವಿಶ್ವವಿದ್ಯಾಲಯದ (DAVV) ಹಾಸ್ಟೆಲ್ ಆವರಣದಲ್ಲಿ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬಳನ್ನು (Indore University) ಹಾಸ್ಟೆಲ್‌ನಿಂದ ಹೊರಹಾಕಲಾಗಿದೆ ಎಂದು ವಿಶ್ವವಿದ್ಯಾಲಯದ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ವಾಸವಾಗಿರುವ ವಿದ್ಯಾರ್ಥಿನಿ ಕೋಣೆಯಲ್ಲಿ ಅಸಭ್ಯವಾಗಿ ವರ್ತಿಸುವುದು, ಅನುಚಿತವಾಗಿ ವರ್ತಿಸುವುದರ ಜೊತೆಗೆ ಮೊಬೈಲ್ ಅಪ್ಲಿಕೇಶನ್ ಮೂಲಕ ಪುರುಷರೊಂದಿಗೆ ಸಂವಹನ ನಡೆಸುತ್ತಾರೆ ಎಂದು ಇತರ ಸಹಪಾಠಿಗಳು ಲಿಖಿತ ದೂರು ನೀಡಿದ ನಂತರ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೂರುಗಳ ನಂತರ, ವಿಶ್ವವಿದ್ಯಾನಿಲಯವು ಆರೋಪಗಳನ್ನು ಪರಿಶೀಲಿಸಲು ಆಂತರಿಕ ತನಿಖಾ ಸಮಿತಿಯನ್ನು ರಚಿಸಿತು. ತನಿಖೆಯ ಸಮಯದಲ್ಲಿ ವಾರ್ಡನ್ ವಿದ್ಯಾರ್ಥಿಯ ಕೊಠಡಿಯಲ್ಲಿ ಶೋಧ ನಡೆಸಿದ್ದು, ಈ ವೇಳೆ ನಿಷೇಧಿತ ವಸ್ತುಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ.
ತನಿಖೆಯ ನಂತರ, ಈ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಉಳಿಯುವುದರಿಂದ ಇನ್ನಿತರ ವಿದ್ಯಾರ್ಥಿನಿಗಳಿಗೆ ಗಂಭೀರ ಸಮಸ್ಯೆಗಳು ಎದುರಾಗಬಹುದು ಎಂದು ಅರಿತುಕೊಂಡಿದ್ದೇವೆ ಆದರಿಂದ ತಕ್ಷಣವೇ ಜಾರಿಗೆ ಬರುವಂತೆ ವಿದ್ಯಾರ್ಥಿನಿಯನ್ನು ಹಾಸ್ಟೆಲ್‌ನಿಂದ ಹೊರಹಾಕಲಾಗಿದೆ ಎಂದು ವಿಸಿ ಸಿಂಘೈ ಹೇಳಿದ್ದಾರೆ (ಏಜೆನ್ಸೀಸ್).