ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಭಾರಿ ಬಿರುಕು, ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಜುಲೈ ಮೂರನೇ ವಾರದಲ್ಲಿ ಆರಂಭವಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಕ್ಷೇತ್ರ ಮರುವಿಂಗಡಣೆ ವಿಧೇಯಕ (Delimitation Bill) ಹಾಗೂ ಒಂದು ದೇಶ, ಒಂದು ಚುನಾವಣೆ (One Nation, One Election) ನಂತಹ ಐತಿಹಾಸಿಕ ಮಸೂದೆಗಳನ್ನು ಮರು-ಮಂಡಿಸಿ, ಪಾಸ್ ಮಾಡಿಕೊಳ್ಳಲು ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ತೆರೆಮರೆಯಲ್ಲಿ ಭಾರಿ ರಣತಂತ್ರ ರೂಪಿಸುತ್ತಿದೆ ಎಂದು ವರದಿಯಾಗಿದೆ.