ಆದರೆ, ಈ ಆರೋಪಗಳನ್ನು ನಿರಾಕರಿಸಿರುವ ಕೇಂದ್ರ ಸರ್ಕಾರವು, ಫೋಟೋ ಮತ್ತು ರೀಲ್ ಬ್ಲಾಕ್ ಆಗಲೂ ಹಾಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ. ಇದು ಇನ್‌ಸ್ಟಾಗ್ರಾಮ್ ಸಂಸ್ಥೆಯ ತಾಂತ್ರಿಕ ಸಮಸ್ಯೆಯಿಂದ ಸಂಭವಿಸಿದೆ ಎಂದು ಸರ್ಕಾರ ವಿವರಣೆ ನೀಡಿದೆ. ಈ ಘಟನೆಯು ಸಾಮಾಜಿಕ ಜಾಲತಾಣಗಳಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸರ್ಕಾರದ ಹಸ್ತಕ್ಷೇಪದ ಕುರಿತು ದೊಡ್ಡ ಮಟ್ಟದ ಚರ್ಚೆಗೆ ದಾರಿ ಮಾಡಿಕೊಟ್ಟಿದೆ.