ಈ ಬಾರಿ ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ತಮಿಳುನಾಡು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಈ ರಾಜ್ಯಗಳಲ್ಲಿ ಮತದಾನದ ದಿನಾಂಕಗಳು ಇನ್ನೂ ಅಧಿಕೃತವಾಗಿ ಪ್ರಕಟವಾಗದ ಕಾರಣ, ಅಲ್ಲಿನ ಪಂದ್ಯಗಳಿಗೆ ಭದ್ರತೆ ಒದಗಿಸುವ ಹಿತದೃಷ್ಟಿಯಿಂದ ಬಿಸಿಸಿಐ ಸದ್ಯಕ್ಕೆ ಮೊದಲ 16 ದಿನಗಳ ವೇಳಾಪಟ್ಟಿಯನ್ನು ಮಾತ್ರ ಬಿಡುಗಡೆ ಮಾಡಿದೆ. ಚುನಾವಣಾ ಆಯೋಗವು ದಿನಾಂಕಗಳನ್ನು ಘೋಷಿಸಿದ ಬಳಿಕ ಐಪಿಎಲ್ನ ಎರಡನೇ ಹಂತದ ವೇಳಾಪಟ್ಟಿ ಹೊರಬೀಳಲಿದೆ ಎಂದು ವರದಿಯಾಗಿದೆ(ಏಜೆನ್ಸೀಸ್).