ಹೌದು, ಪಶ್ಚಿಮ ಬಂಗಾಳದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ಜವಾಬ್ದಾರಿ ಹೊತ್ತಿರುವ ಚುನಾವಣಾ ಆಯೋಗವು, ಯುಪಿ ಕೇಡರ್‌ನ ಖಡಕ್ ಐಪಿಎಸ್ ಅಧಿಕಾರಿ ಅಜಯ್ ಪಾಲ್ ಶರ್ಮಾ ಅವರನ್ನು ವಿಶೇಷ ವೀಕ್ಷಕರನ್ನಾಗಿ ನೇಮಿಸಿದೆ. ಇತ್ತೀಚೆಗೆ ಮತದಾನದ ವೇಳೆ ಮತದಾರರನ್ನು ಹೆದರಿಸುವ ಅಥವಾ ಪ್ರಭಾವ ಬೀರಲು ಯತ್ನಿಸುವ ಗೂಂಡಾಗಳಿಗೆ ಶರ್ಮಾ ಅವರು ಕಠಿಣ ಎಚ್ಚರಿಕೆ ನೀಡಿದ್ದರು. "ಯಾರೇ ಕಾನೂನು ಕೈಗೆತ್ತಿಕೊಂಡರೂ ಸುಮ್ಮನೆ ಬಿಡುವುದಿಲ್ಲ" ಎಂಬ ಅವರ ಮಾತುಗಳು ಬಂಗಾಳದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿತ್ತು.