ಇನ್ನೂ ಟ್ರಂಪ್ ಅವರ ರಾಜತಾಂತ್ರಿಕತೆ ಮಾತುಕತೆ ನಡೆಯುತ್ತಿದೆ ಎಂಬ ಹೇಳಿಕೆಯನ್ನು ಇರಾನ್ ತಿರಸ್ಕರಿಸಿದ್ದರೂ, ಪಾಕಿಸ್ತಾನವು ಸಂಭಾವ್ಯ ಮಧ್ಯವರ್ತಿಯಾಗಿ ಕೆಲಸ ಮಾಡ್ತಿದೆ ಎನ್ನಲಾಗಿದೆ. ಪ್ರಧಾನಿ ಶೆಹಬಾಜ್ ಷರೀಫ್ ಮಾತುಕತೆಗಳನ್ನು ಆಯೋಜಿಸಲು ಮುಂದಾಗಿದ್ದು, ಉಪಾಧ್ಯಕ್ಷ ಜೆಡಿ ವ್ಯಾನ್ಸ್, ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ, ರಾಯಭಾರಿ ಸ್ಟೀವ್ ವಿಟ್ಕಾಫ್ ಮತ್ತು ಸಲಹೆಗಾರ ಜೇರೆಡ್ ಕುಶ್ನರ್ ಸೇರಿದಂತೆ ಅನೇಕ ಹಿರಿಯ ವ್ಯಕ್ತಿಗಳು ಇರಾನ್ ಜೊತೆಗಿನ ರಾಜತಾಂತ್ರಿಕ ಮಾತುಕತೆಯನ್ನು ಭಾಗಿಯಾಗಿದ್ದಾರೆ ಎಂದು ಟ್ರಂಪ್ ತಿಳಿಸಿದ್ದಾರೆ (ಏಜೆನ್ಸೀಸ್).