ಐಆರ್​ಸಿಟಿಸಿ ಹಗರಣ; ಲಾಲು ಪ್ರಸಾದ್ ಯಾದವ್ ವಿಚಾರಣೆಗೆ ತಡೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಣೆ | Lalu Prasad Yadav

 ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್
ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್
Published on
ನವದೆಹಲಿ: ಐಆರ್​ಸಿಟಿಸಿ ಹಗರಣ ಪ್ರಕರಣದಲ್ಲಿ ಆರ್​ಜೆಡಿ ಮುಖ್ಯಸ್ಥ ಮತ್ತು ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್(Lalu Prasad Yadav) ಅವರ ವಿಚಾರಣೆಗೆ ತಡೆ ನೀಡಲು ಇಂದು(ಜ. 05) ದೆಹಲಿ ಹೈಕೋರ್ಟ್ ನಿರಾಕರಿಸಿದ್ದು, ಈ ಕುರಿತು ಉತ್ತರ ನೀಡುವಂತೆ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ.
ಹೈಕೋರ್ಟ್​ನ ನ್ಯಾ.ಸ್ವರ್ಣಕಾಂತ ಶರ್ಮಾ ಅವರ ಪೀಠವು, ತಡೆಯಾಜ್ಞೆ ಕೋರಿ ನೀವು ಮೊದಲೇ ಬರಬೇಕಿತ್ತು. ನೀವು ಬರಲಿಲ್ಲ. ವಿಚಾರಣಾ ನ್ಯಾಯಾಲಯದ ಆದೇಶವನ್ನು ಮೊದಲೇ ಅಂಗೀಕರಿಸಲಾಗಿತ್ತು. ಈ ಹಿನ್ನೆಲೆ ಸಿಬಿಐ ಪ್ರತಿಕ್ರಿಯೆ ಇಲ್ಲದೆ ತಡೆಯಾಜ್ಞೆ ನೀಡುವುದಿಲ್ಲ. ಸಿಬಿಐ ಅಧಿಕಾರಿಗಳು ಉತ್ತರಿಸಲಿ ಎಂದು ವಿಚಾರಣೆಗೆ ತಡೆ ನೀಡದೇ ಜ. 14ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಐಆರ್​ಸಿಟಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯವು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಮಾಜಿ ಸಿಎಂ ಯಾದವ್ ಸೇರಿ ಅವರ ಪತ್ನಿ ರಾಬ್ಡಿದೇವಿ, ಪುತ್ರ ತೇಜಸ್ವಿ ಯಾದವ್ ಸೇರಿ 13 ಆರೋಪಿಗಳ ವಿರುದ್ಧ ಆರೋಪಗಳನ್ನು ಹೊರಿಸಿತ್ತು.
2004 ಮತ್ತು 2009ರ ನಡುವೆ ಲಾಲು ಪ್ರಸಾದ್ ಯಾದವ್, ಕೇಂದ್ರ ರೈಲ್ವೆ ಸಚಿವರಾಗಿದ್ದಾಗ ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ(ಐಆರ್‌ಸಿಟಿಸಿ) ಎರಡು ಹೋಟೆಲ್‌ಗಳ ಕಾರ್ಯಾಚರಣೆಯ ಒಪ್ಪಂದಗಳನ್ನು ಖಾಸಗಿ ಸಂಸ್ಥೆಗೆ ನೀಡುವಲ್ಲಿ ನಡೆದ ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣ ಇದಾಗಿದೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net