ನವದೆಹಲಿ: ಐಆರ್‌ಸಿಟಿಸಿ ಹಗರಣ ಪ್ರಕರಣದಲ್ಲಿ ತಮ್ಮ ಮತ್ತು ತಮ್ಮ ಪತಿ ಲಾಲು ಪ್ರಸಾದ್ ಯಾದವ್, ಪುತ್ರ ತೇಜಸ್ವಿ ಯಾದವ್ ಹಾಗೂ ಕುಟುಂಬದ ಇತರ ಸದಸ್ಯರ ವಿರುದ್ಧ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶರು ಪಕ್ಷಪಾತಿಯಾಗಿದ್ದಾರೆ ಎಂದು ಆರೋಪಿಸಿ, ವಿಚಾರಣೆಯನ್ನು ಬೇರೆ ಪೀಠಕ್ಕೆ ವರ್ಗಾಯಿಸುವಂತೆ ಕೋರಿ ಸೋಮವಾರ(ನ. 24) ದೆಹಲಿ ರೋಸ್ ಅವೆನ್ಯೂ ಕೋರ್ಟ್ಗೆ ಬಿಹಾರ ಮಾಜಿ ಸಿಎಂ ರಾಬ್ಡಿ ದೇವಿ(Ex-CM Rabdi Devi) ಅರ್ಜಿ ಸಲ್ಲಿಸಿದ್ದಾರೆ.