ಆಗಸ್ಟ್ 14ರಂದು ಸಿಎಂ ಸೊರೆನ್ಗೆ ರಾಹುಲ್ ಗಾಂಧಿ ಪತ್ರ ಬರೆದಿದ್ದು, ಭಾರತದ ಸಂವಿಧಾನದಲ್ಲಿ ಅಳವಡಿಸಲಾಗಿರುವ ಶಾಂತಿಯುತ ಪ್ರತಿಭಟನೆಯ ಹಕ್ಕು ನಮ್ಮ ಪ್ರಜಾಪ್ರಭುತ್ವದ ಪ್ರಮುಖ ಆಧಾರಸ್ತಂಭಗಳಲ್ಲಿ ಒಂದಾಗಿದೆ ಎಂದು ಕಾಂಗ್ರೆಸ್ ಪಕ್ಷವು ನಂಬುತ್ತದೆ. ಆದ್ದರಿಂದಲೇ, ಕಳೆದ ಕೆಲವು ತಿಂಗಳುಗಳಿಂದ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿನ ಅವ್ಯವಸ್ಥೆಗಳ ವಿರುದ್ಧ ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳಿಗೆ ನಾವು ನಮ್ಮ ಸಂಪೂರ್ಣ ಬೆಂಬಲವನ್ನು ನೀಡಿದ್ದೇವೆ ಎಂದು ಹೇಳಿದ್ದಾರೆ.