ಭಾರತ ತಂಡವು ವಿಶ್ವಕಪ್ ಗೆದ್ದ ಬಳಿಕ ತಂಡದ ನಾಯಕ ಸೂರ್ಯಕುಮಾರ್ ಯಾದವ್, ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್ ಷಾ, ವಿಶ್ವಕಪ್ ಟ್ರೋಫಿಯೊಂದಿಗೆ ಅಹಮದಾಬಾದ್‌ನ ಹನುಮಾನ್ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು. ಈ ನಡೆಯನ್ನು ಪ್ರಶ್ನಿಸಿದ್ದ ಮಾಜಿ ಸಂಸದ ಮತ್ತು ಕ್ರಿಕೆಟಿಗ ಕೀರ್ತಿ ಆಜಾದ್, ವಿಶ್ವಕಪ್ ಗೆಲುವು 1.4 ಬಿಲಿಯನ್ ಭಾರತೀಯರಿಗೆ ಸೇರಿದ್ದು, ಕ್ರೀಡೆಯು ಯಾವುದೇ ನಿರ್ದಿಷ್ಟ ಧರ್ಮಕ್ಕಿಂತ ರಾಷ್ಟ್ರವನ್ನು ಪ್ರತಿನಿಧಿಸುತ್ತದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಳ್ಳುವ ಮೂಲಕ ಧಾರ್ಮಿಕ ಚರ್ಚೆಯನ್ನು ಹುಟ್ಟುಹಾಕಿದ್ದರು.