ಪೊಲೀಸರ ಪ್ರಕಾರ, ಈ ಜಾಲದ ಮುಖ್ಯ ಉದ್ದೇಶ ಭಾರತದಲ್ಲಿ ಉಗ್ರ ದಾಳಿ ನಡೆಸುವುದು, ಅಕ್ರಮ ಶಸ್ತ್ರಾಸ್ತ್ರಗಳನ್ನು ಪೂರೈಸುವುದು, ಮಾದಕ ವಸ್ತುಗಳನ್ನು ಸಾಗಾಟ ಮಾಡುವುದು ಹಾಗೂ ಪ್ರಮುಖ ಸ್ಥಳಗಳ ಬಗ್ಗೆ ಮಾಹಿತಿ ಸಂಗ್ರಹಿಸುವುದಾಗಿತ್ತು. ಪಾಕಿಸ್ತಾನದಿಂದ ಪಂಜಾಬ್ ಮಾರ್ಗವಾಗಿ ಶಸ್ತ್ರಾಸ್ತ್ರ, ಗುಂಡುಗಳು ಹಾಗೂ ಹೆರಾಯಿನ್‌ನಂತಹ ಮಾದಕ ವಸ್ತುಗಳನ್ನು ಭಾರತಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು. ಬಳಿಕ ಅವುಗಳನ್ನು ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ವಿವಿಧ ಕಡೆಗಳಿಗೆ ತಲುಪಿಸಲಾಗುತ್ತಿತ್ತು.