ಒಳನುಸುಳುಕೋರರನ್ನು ತಡೆಯುವುದು ಅತ್ಯಗತ್ಯ; SIR ಬಗ್ಗೆ ಅಮಿತ್​ ಷಾ ಹೇಳಿದ್ದೇನು..? Amit Shah

Union Home Minister Amit Shah ಕೇಂದ್ರ ಗೃಹ ಸಚಿವ ಅಮಿತ್ ಷಾ
Union Home Minister Amit Shah ಕೇಂದ್ರ ಗೃಹ ಸಚಿವ ಅಮಿತ್ ಷಾ
Published on
ನವದೆಹಲಿ: ದೇಶದ ಹಲವು ರಾಜ್ಯಗಳಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ನಡೆಯುತ್ತಿರುವ ಚರ್ಚೆಗಳಿಗೆ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ(Amit Shah), ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ಒಳನುಸುಳುವಿಕೆಯನ್ನು ತಡೆಯುವುದು ಅತ್ಯಗತ್ಯವಾಗಿದೆ ಎಂದು ಶುಕ್ರವಾರ (ನ.21) ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅಮಿತ್ ಷಾ, ಒಳನುಸುಳುಕೊರರನ್ನು ತಡೆಗಟ್ಟಲು BSF ದೇಶದ ಎಲ್ಲಾ ಗಡಿಗಳಲ್ಲಿ ಅವಿಶ್ರಾಂತವಾಗಿ ಕಾರ್ಯನಿರ್ವಹಿಸುತ್ತಿದೆ. ಅಲ್ಲದೆ, ಒಳನುಸುಳುವವರನ್ನು ತಡೆಯುವುದು ರಾಷ್ಟ್ರೀಯ ಭದ್ರತೆಗೆ ಮಾತ್ರವಲ್ಲದೆ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯು ಕಲುಷಿತಗೊಳ್ಳದಂತೆ ರಕ್ಷಿಸಲು ಸಹ ಅತ್ಯಗತ್ಯವಾಗಿದೆ ಎಂದು ಹೇಳಿದ್ದಾರೆ.
ಮುಂದುವರೆದು ಮಾತನಾಡಿದ ಷಾ, ಕೆಲವು ರಾಜಕೀಯ ಪಕ್ಷಗಳು ಒಳನುಸುಳುಕೋರರನ್ನು ತೆಗೆದುಹಾಕುವ ಅಭಿಯಾನವನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿರುವುದು ದುರದೃಷ್ಟಕರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಮತದಾರರ ಪಟ್ಟಿಯನ್ನು ಶುದ್ಧೀಕರಿಸಲು ಮತ್ತು ಪರಿಶೀಲಿಸಲು ಚುನಾವಣಾ ಆಯೋಗವು ಪ್ರಾರಂಭಿಸಿದ SIR ಪ್ರಕ್ರಿಯೆಯನ್ನು ಈ ಪಕ್ಷಗಳು ವಿರೋಧಿಸುತ್ತಿವೆ ಎಂದು ತಿಳಿಸಿದ್ದಾರೆ.
ಈ ದೇಶದಲ್ಲಿರುವ ಪ್ರತಿಯೊಬ್ಬ ನುಸುಳುಕೋರರನ್ನು ಗುರುತಿಸಿ ತೆಗೆದುಹಾಕಲು ನಾವು ಬದ್ಧರಾಗಿದ್ದೇವೆ. ಈ ರಾಷ್ಟ್ರದ ಮುಖ್ಯಮಂತ್ರಿ ಅಥವಾ ಪ್ರಧಾನಿ ಯಾರು ಎಂಬುದನ್ನು ನಿರ್ಧರಿಸುವ ಹಕ್ಕು ಭಾರತೀಯ ನಾಗರಿಕರಿಗೆ ಮಾತ್ರ ಇದೆ. ಅಲ್ಲದೆ, ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಲುಷಿತಗೊಳಿಸುವ ಅಥವಾ ನಮ್ಮ ಪ್ರಜಾಪ್ರಭುತ್ವ ನಿರ್ಧಾರಗಳ ಮೇಲೆ ಪ್ರಭಾವ ಬೀರುವ ಹಕ್ಕು ಯಾವುದೇ ನುಸುಳುಕೋರರಿಗೆ ಇಲ್ಲ ಎಂದು ಷಾ ಕಿಡಿಕಾರಿದ್ದಾರೆ.
ಭಾರತದ ಪ್ರಜಾಪ್ರಭುತ್ವವನ್ನು ಸುರಕ್ಷಿತಗೊಳಿಸುವ ಮತ್ತು ಶುದ್ಧೀಕರಿಸುವ ಗುರಿಯನ್ನು SIR ಹೊಂದಿದೆ. ಚುನಾವಣಾ ಆಯೋಗ ನಡೆಸುವ ಮತದಾರರ ಪಟ್ಟಿ ಪರಿಶೀಲನಾ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಬೆಂಬಲಿಸುವಂತೆ ಷಾ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಅಲ್ಲದೆ, ನುಸುಳುಕೋರರನ್ನು ರಕ್ಷಿಸುತ್ತಿದ್ದಾರೆ ಎನ್ನಲಾದ ರಾಜಕೀಯ ಪಕ್ಷಗಳು, ವಿಶೇಷವಾಗಿ ಬಿಹಾರದಂತಹ ಚುನಾವಣೆಗಳ ಸಮಯದಲ್ಲಿ, ಭಾರತದ ಜನರು ಇಂತಹ ಉದ್ದೇಶಗಳನ್ನು ಎಂದಿಗೂ ಬೆಂಬಲಿಸುವುದಿಲ್ಲ ಎಂದು ಗೃಹ ಸಚಿವರು ಎಚ್ಚರಿಸಿದ್ದಾರೆ.

SIRಗೆ ಮಮತಾ ಬ್ಯಾನರ್ಜಿ ವಿರೋಧ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರಿಗೆ ಬರೆದಿರುವ ಪತ್ರದಲ್ಲಿ, SIR ತೀವ್ರ ಆತಂಕಕಾರಿ ಹಂತವನ್ನು ತಲುಪಿದೆ. ಈ ಕಾರ್ಯಾಚರಣೆಯನ್ನು ಯೋಜಿತವಲ್ಲದ, ಅಪಾಯಕಾರ" ರೀತಿಯಲ್ಲಿ ನಡೆಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಇದು ಮೊದಲ ದಿನದಿಂದಲೇ ವ್ಯವಸ್ಥೆಯನ್ನು ದುರ್ಬಲಗೊಳಿಸಿದೆ ಎಂದಿದ್ದಾರೆ ,(ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net