ಪೊಲೀಸರ ಪ್ರಕಾರ, ಮನೆಯ ಮಾಲೀಕರು ತಮ್ಮ ಫ್ಲಾಟ್‌ನಲ್ಲಿ ಪದೇ ಪದೇ ಬೆಲೆಬಾಳುವ ವಸ್ತುಗಳು ಕಾಣೆಯಾಗುತ್ತಿರುವುದನ್ನು ಗಮನಿಸಿ, ತೀವ್ರ ಅನುಮಾನ ವ್ಯಕ್ತಪಡಿಸಿ ಮನೆಯೊಳಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದರು. ಇದಕ್ಕೂ ಮುನ್ನ ಇದೇ ಫ್ಲಾಟ್‌ನಿಂದ ಸುಮಾರು 7 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳು ಹಾಗೂ ನಗದನ್ನು ಕಳವು ಮಾಡಲಾಗಿತ್ತು ಎನ್ನಲಾಗಿದೆ. ಆದಾಗ್ಯೂ, ಪಕ್ಕದ ಫ್ಲಾಟ್‌ನಲ್ಲಿ ವಾಸಿಸುತ್ತಿರುವ ಮಹಿಳೆಯ ಮೇಲೆ ಅನುಮಾನವಿದೆ ಎಂದು ದೂರುದಾರರು ಹೇಳಿಕೊಂಡಿದ್ದರು ಎಂದು ತಿಳಿಸಿದ್ದಾರೆ.