ಜಾರ್ಖಂಡ್‌ನಲ್ಲಿ ಜೆಎಸ್‌ಎಸ್‌ಸಿ ಸಿಜಿಎಲ್ (JSSC CGL) ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ವ್ಯಾಪಕ ಅಕ್ರಮಗಳ ವಿರುದ್ಧ ಅಭ್ಯರ್ಥಿಗಳು ಉಗ್ರ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ರಾಂಚಿ, ಹಜಾರಿಬಾಗ್, ಧನ್‌ಬಾದ್, ಬೊಕಾರೊ ಸೇರಿದಂತೆ ವಿವಿಧ ಜಿಲ್ಲೆಗಳ ವಿದ್ಯಾರ್ಥಿಗಳು ಬೀದಿಗಿಳಿದು ಪರೀಕ್ಷೆಯಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಹಾಗೂ ಸ್ವತಂತ್ರ ತನಿಖೆಗೆ ಒತ್ತಾಯಿಸಿ ದೊಡ್ಡ ಮಟ್ಟದ ಆಂದೋಲನವನ್ನೇ ಹಮ್ಮಿಕೊಂಡಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆ, ಒಎಂಆರ್ (OMR) ಹಾಳೆಗಳ ಸೋರಿಕೆ ಮತ್ತು ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವ ಆರೋಪಗಳಿಂದ ಈ ಹೋರಾಟವು ತೀವ್ರಗೊಂಡಿದೆ. ರಾಜ್ಯ ಸರ್ಕಾರವು ಮಾತುಕತೆಗೆ ಮುಂದಾಗಿದ್ದರು ಸಹ ಜೆಎಸ್‌ಎಸ್‌ಸಿ ಸಿಜಿಎಲ್ ಪರೀಕ್ಷೆಯನ್ನು ರದ್ದುಗೊಳಿಸಲು ಸರ್ಕಾರ ಒಪ್ಪಿಲ್ಲದಿರುವುದು ಜಾರ್ಖಂಡ್‌ನಲ್ಲಿ ಈ ಸಮಸ್ಯೆಯನ್ನು ಪ್ರಮುಖ ರಾಜಕೀಯ ಮತ್ತು ಆಡಳಿತಾತ್ಮಕ ಬಿಕ್ಕಟ್ಟನ್ನಾಗಿ ಪರಿವರ್ತಿಸಿದೆ.