Sabarimala Gold Theft Case : ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಸಂಬಂಧಿಸಿದ ಚಿನ್ನಾಭರಣಗಳ ನಾಪತ್ತೆ ಪ್ರಕರಣವು ಈಗ ಸಿನಿರಂಗ ಮತ್ತು ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಈ ಬೃಹತ್ ಹಗರಣದ ತನಿಖೆಯನ್ನು ಎಸ್‌ಐಟಿ ಅಧಿಕಾರಿಗಳು ಚುರುಕುಗೊಳಿಸಿದ್ದು, ಮಲಯಾಳಂ, ಕನ್ನಡ, ತಮಿಳು ಮತ್ತು ತೆಲುಗು ಪ್ರೇಕ್ಷಕರಿಗೆ ಪರಿಚಿತರಾಗಿರುವ ಪ್ರಸಿದ್ಧ ನಟ ಜಯರಾಮ್ ಅವರ ಹೆಸರು ಸಹ ಈ ಪ್ರಕರಣದಲ್ಲಿ ಕೇಳಿಬಂದಿದೆ.