ಈ ಭಾರಿ 140 ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಯುಡಿಎಫ್ 99 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ವಿಜಯನ್ ನೇತೃತ್ವದ ಎಲ್ಡಿಎಫ್ 39 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಎನ್ಡಿಎ ಹಾಗೂ ಇತರೆ ಅಭ್ಯರ್ಥಿಗಳು 2 ಕ್ಷೇತ್ರಗಳಲ್ಲಿ ತಮ್ಮ ಹೋರಾಟವನ್ನು ಮುಂದುವರಿಸಿದ್ದಾರೆ. ಕೇರಳ ವಿಧಾನಸಭಾ ಚುನಾವಣೆಯಲ್ಲಿ 71 ಕ್ಷೇತ್ರಗಳಲ್ಲಿ ಗೆಲ್ಲುವ ಪಕ್ಷ ಸರ್ಕಾರ ರಚಿಸಲಿದ್ದು, ಯುಡಿಎಫ್ 100 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುವ ಹಿನ್ನಲೆ ಗೆಲುವು ಬಹುತೇಕ ಖಚಿತವಾಗಿದೆ, (ಏಜನ್ಸೀಸ್).