ತಮ್ಮ ವಿಶಿಷ್ಟ ಧ್ವನಿ ಮತ್ತು ಸಂಗೀತದ ಮೂಲಕ ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದಿದ್ದ ಕಿಶೋರ್ ಕುಮಾರ್ 1987ರಲ್ಲಿ ನಿಧನರಾದರು. ಮುಂಬೈನಲ್ಲಿ ಅವರಿಗೆ ಹಠಾತ್ ಹೃದಯಾಘಾತವಾಗಿದ್ದು, 58ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದರು. ಇಂದಿಗೂ ಕಿಶೋರ್ ಕುಮಾರ್ ಅವರ ಹಾಡುಗಳು ಸಂಗೀತಪ್ರಿಯರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿವೆ. ಅಮಿತಾಭ್ ಬಚ್ಚನ್ ಹಂಚಿಕೊಂಡ ಈ ಹಳೆಯ ನೆನಪು, ಇಬ್ಬರು ದಿಗ್ಗಜರ ನಡುವಿನ ಆತ್ಮೀಯ ಬಾಂಧವ್ಯವನ್ನು ಮತ್ತೊಮ್ಮೆ ನೆನಪಿಸಿದೆ,(ಏಜೇನ್ಸೀಸ್).