ಬೆಂಗಳೂರು: ಐಪಿಎಲ್ ಕ್ರಿಕೆಟ್ ಪಂದ್ಯಗಳ ಟಿಕೆಟ್‌ಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಕೆಲವು ಕಾರ್ಪೊರೇಟ್ ಸಂಸ್ಥೆಗಳು ಮತ್ತು ವ್ಯಕ್ತಿಗಳ ಬಂಧನವಾಗಿರುವ ಬೆನ್ನಲ್ಲೇ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಈ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ.