ಇಂದು ಹೊರಡಿಸಲಾದ ಮಹಾಭಿಯೋಗ ಸೂಚನೆಯ ಪ್ರಕಾರ, ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶರ ಪದಚ್ಯುತಿಗಾಗಿ ಭಾರತದ ಸಂವಿಧಾನದ 124 ನೇ ವಿಧಿಯೊಂದಿಗೆ ಓದಲಾದ 217 ನೇ ವಿಧಿಯ ಅಡಿಯಲ್ಲಿ ಪ್ರಸ್ತಾವನೆಯನ್ನು ಮಂಡಿಸಲಾಗಿದೆ. ನ್ಯಾಯಾದೀಶ ಸ್ವಾಮಿನಾಥನ್ ನಡವಳಿಕೆಯು ನಿಷ್ಪಕ್ಷಪಾತ ಮತ್ತು ಪಾರದರ್ಶಕತೆಯ ಬಗ್ಗೆ ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ನೋಟಿಸ್‌ನಲ್ಲಿ ಆರೋಪಿಸಲಾಗಿದೆ, ಅವರ ತೀರ್ಪುಗಳು ರಾಜಕೀಯ ಸಿದ್ಧಾಂತದಿಂದ ಪ್ರಭಾವಿತವಾಗಿವೆ, ಇದು ಜಾತ್ಯತೀತ ಸಾಂವಿಧಾನಿಕ ತತ್ವಗಳಿಗೆ ವಿರುದ್ಧವಾಗಿದೆ ಎಂದು ಉಲ್ಲೇಖಿಸಲಾಗಿದೆ.