ಬಿಜೆಪಿ ಪ್ರಧಾನ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಪುತ್ರ ಪ್ರಿಯಾಂಕ್, ಖಾಸಗಿ ಟ್ರಸ್ಟ್ ಹೆಸರಿನಡಿ ಕರ್ನಾಟಕದಲ್ಲಿ ಭ್ರಷ್ಟಾಚಾರ ಮತ್ತು ಭೂಕಬಳಿಕೆಯಲ್ಲಿ ಭಾಗಿಯಾಗಿದ್ದಾರೆ. ಟ್ರಸ್ಟ್ನಲ್ಲಿ ಖರ್ಗೆ ಪತ್ನಿ ಹಾಗೂ ಅಳಿಯ ಸಹ ಇದ್ದಾರೆ. ಟ್ರಸ್ಟ್ ಮೂಲಕ ಕರ್ನಾಟಕದ ವಿವಿಧ ಭಾಗಗಳಲ್ಲಿ ಬಡವರಿಗೆ ಸೇರಿದ್ದ ಭೂಮಿ ಕಬಳಿಸಲು ಅಧಿಕಾರ ಬಳಸಿಕೊಂಡಿದ್ದಾರೆ. 2024ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಏರೋಸ್ಪೇಸ್ ಮತ್ತು ರಕ್ಷಣಾ ವಿಭಾಗದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ನೆಪದಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಮೂಲಕ ಸಿದ್ದಾರ್ಥ ವಿಹಾರ ಟ್ರಸ್ ಗೆ ಐದು ಎಕರೆ ಭೂಮಿಯನ್ನು ಮಂಜೂರು ಮಾಡಿರುವುದು ಲೂಟಿ ಪ್ರಕರಣಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದಿದ್ದಾರೆ.