CRPF ಶಿಬಿರದ ಮೇಲಿನ ದಾಳಿಗೆ ಪ್ರತೀಕಾರ: ಭದ್ರತಾ ಪಡೆಗಳ ಎನ್​ಕೌಂಟರ್​ಗೆ ಕುಖ್ಯಾತ ಲಷ್ಕರ್ ಉಗ್ರ ಲತೀಫ್ ಭಟ್ ಬಲಿ! CRPF Camp Attack

ನವೆಂಬರ್ 11ರಂದು ಕುಲ್ಗಾಮ್‌ನ ಮೀರ್ ಬಜಾರ್ ಬಳಿಯಿರುವ ಸಿಆರ್‌ಪಿಎಫ್ (CRPF) ಪೋಸ್ಟ್ ಮೇಲೆ ಶಸ್ತ್ರಸಜ್ಜಿತ ಇಬ್ಬರು ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಮೂವರು ಸಿಆರ್‌ಪಿಎಫ್ ಯೋಧರು ಗಾಯಗೊಂಡಿದ್ದು, ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿತ್ತು.
CRPF Camp Attack
CRPF ಶಿಬಿರದ ಮೇಲಿನ ದಾಳಿಗೆ ಪ್ರತೀಕಾರ: ಭದ್ರತಾ ಪಡೆಗಳ ಎನ್​ಕೌಂಟರ್​ಗೆ ಕುಖ್ಯಾತ ಲಷ್ಕರ್ ಉಗ್ರ ಲತೀಫ್ ಭಟ್ ಬಲಿ!
Published on: 

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಭರ್ಜರಿ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೊಯ್ಬಾ (LeT) ಸಂಘಟನೆಯ ಕುಖ್ಯಾತ ಉಗ್ರ ಲತೀಫ್ ಭಟ್ ( CRPF Camp Attack ) ಹತನಾಗಿದ್ದು, ಮತ್ತೊಬ್ಬ ಉಗ್ರ ಭದ್ರತಾ ಪಡೆಗಳ ಬಲೆಯಲ್ಲಿ ಸಿಲುಕಿಕೊಂಡಿದ್ದಾನೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಕಳೆದ ವಾರ ಕುಲ್ಗಾಮ್‌ನಲ್ಲಿ ಸಿಆರ್‌ಪಿಎಫ್ (CRPF) ಸಿಬ್ಬಂದಿಯ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಈ ಕಾರ್ಯಾಚರಣೆ ನಡೆಸಲಾಗಿದೆ. ಸದ್ಯ ಭಾರತೀಯ ಸೇನೆ, ಜಮ್ಮು-ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡ (SOG) ಮತ್ತು ಇತರ ಭದ್ರತಾ ಪಡೆಗಳು ಇಡೀ ಪ್ರದೇಶವನ್ನು ಸುತ್ತುವರಿದಿದ್ದು, ಅಡಗಿ ಕುಳಿತಿರುವ ಮತ್ತೊಬ್ಬ ಉಗ್ರನನ್ನು ಸೆದೆಬಡಿಯಲು ತೀವ್ರ ಶೋಧ ಕಾರ್ಯಾಚರಣೆಯನ್ನು ಮುಂದುವರಿಸಿವೆ.

Also Read
ಶೀಘ್ರವೇ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ? ಕೇಂದ್ರ ಸಚಿವ ಸುರೇಶ್ ಗೋಪಿ ಕೊಟ್ಟ ಉತ್ತರವಿದು | Petrol Diesel Price
CRPF Camp Attack

ಹತನಾದ ಉಗ್ರ ಲತೀಫ್ ಭಟ್ ಕುಲ್ಗಾಮ್ ನಿವಾಸಿಯಾಗಿದ್ದು, ಪಾಕಿಸ್ತಾನಿ ಭಯೋತ್ಪಾದಕರೊಂದಿಗೆ ಸೇರಿಕೊಂಡು ದಕ್ಷಿಣ ಕಾಶ್ಮೀರದ ವಿವಿಧ ಅಡಗುತಾಣಗಳಲ್ಲಿ ಸಕ್ರಿಯನಾಗಿದ್ದ ಎಂದು ಭದ್ರತಾ ಮೂಲಗಳು ತಿಳಿಸಿವೆ. ಸ್ಥಳೀಯ ನೆರವುಗಾರರ ಸಹಾಯದಿಂದ ತಲೆಮರೆಸಿಕೊಂಡಿದ್ದ ಈತ 2026ರಲ್ಲಿ ನಡೆದ ಹಲವು ಭೀಕರ ಉಗ್ರ ಕೃತ್ಯಗಳಲ್ಲಿ ಭಾಗಿಯಾಗಿದ್ದ. ವಿಶೇಷವಾಗಿ ಜುಲೈ 22ರಂದು ಅನಂತನಾಗ್‌ನ ಲಾಲ್ ಚೌಕ್ ಪ್ರದೇಶದಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರ ಹತ್ಯೆ ಮತ್ತು ಜುಲೈ 31ರಂದು ಕುಲ್ಗಾಮ್‌ನಲ್ಲಿ ವಲಸೆ ಕಾರ್ಮಿಕರ ಮೇಲೆ ನಡೆದ ಗುಂಡಿನ ದಾಳಿ ಹಾಗೂ ಹತ್ಯೆ ಪ್ರಕರಣಗಳಲ್ಲಿ ಲತೀಫ್ ಭಟ್ ಪ್ರಮುಖ ಆರೋಪಿಯಾಗಿದ್ದನು.

ನವೆಂಬರ್ 11ರಂದು ಕುಲ್ಗಾಮ್‌ನ ಮೀರ್ ಬಜಾರ್ ಬಳಿಯಿರುವ ಸಿಆರ್‌ಪಿಎಫ್ (CRPF) ಪೋಸ್ಟ್ ಮೇಲೆ ಶಸ್ತ್ರಸಜ್ಜಿತ ಇಬ್ಬರು ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಮೂವರು ಸಿಆರ್‌ಪಿಎಫ್ ಯೋಧರು ಗಾಯಗೊಂಡಿದ್ದು, ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿತ್ತು. ದಾಳಿಯ ನಂತರ ಉಗ್ರರು ಸಮೀಪದ ಅರಣ್ಯ ಪ್ರದೇಶಕ್ಕೆ ಪರಾರಿಯಾಗಿದ್ದರು. ಈ ಘಟನೆ ನಡೆದ 24 ಗಂಟೆಗಳ ಒಳಗೆ ಕಿಶ್ತ್ವಾರ್ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತೊಂದು ಅಟ್ಟಹಾಸ ಮೆರೆದಿದ್ದು, ಸೇನೆಯ ಉಗ್ರ ನಿಗ್ರಹ ಕಾರ್ಯಾಚರಣೆಗೆ ಸಾಥ್ ನೀಡಲು ತೆರಳುತ್ತಿದ್ದ ಬಾಬಿ ಚಂದ್ ಮತ್ತು ಯಶ್‌ಪಾಲ್ ಕುಮಾರ್ ಎಂಬ ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳನ್ನು (SPOs) ಗುಂಡಿಕ್ಕಿ ಹತ್ಯೆ ಮಾಡಿದ್ದರು.

ಸರಣಿ ಉಗ್ರ ದಾಳಿಗಳ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದಾದ್ಯಂತ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ ಎಂದು ಸಿಆರ್‌ಪಿಎಫ್ ವಿಶೇಷ ಮಹಾನಿರ್ದೇಶಕ (SDG) ಸಂದೀಪ್ ಖಿರ್ವಾರ್ ಸೋಮವಾರ ತಿಳಿಸಿದ್ದಾರೆ. ಕಳೆದ ವಾರದ ದಾಳಿಯ ನಂತರ ಎಲ್ಲಾ ಭದ್ರತಾ ಪಡೆಗಳಿಗೆ ಹೈ ಅಲರ್ಟ್ ಘೋಷಿಸಲಾಗಿದ್ದು, ಉಗ್ರರ ಹೆಡೆಮುರಿ ಕಟ್ಟಲು ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ. ಇದೀಗ ಕುಲ್ಗಾಮ್ ಎನ್‌ಕೌಂಟರ್‌ನಲ್ಲಿ ಪ್ರಮುಖ ಉಗ್ರನನ್ನು ಹೊಡೆದುರುಳಿಸುವ ಮೂಲಕ ಭದ್ರತಾ ಪಡೆಗಳು ಉಗ್ರರಿಗೆ ತಕ್ಕ ಪಾಠ ಕಲಿಸಿವೆ.

Also Read
ಮೂವರು ಅಮಾಯಕರ ಪ್ರಾಣ ತೆಗೆದು ದೌಲತ್ತಿನ ಮಾತುಗಳನ್ನಾಡಿದವನಿಗೆ ಕೇವಲ 36 ದಿನಗಳಲ್ಲೇ ಜಾಮೀನು! Mini Cooper accident
CRPF Camp Attack

ಮತ್ತೊಂದೆಡೆ, ಕಣಿವೆ ರಾಜ್ಯದಲ್ಲಿ ನಡೆದ ಈ ಎರಡು ಉಗ್ರ ದಾಳಿಗಳು ರಾಜಕೀಯ ವಲಯದಲ್ಲೂ ತೀವ್ರ ಚರ್ಚೆ ಮತ್ತು ಟೀಕೆಗೆ ಗ್ರಾಸವಾಗಿವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಸಂಪೂರ್ಣವಾಗಿ ಅಂತ್ಯಗೊಂಡಿದೆ ಎಂಬ ಸರ್ಕಾರದ ಅಧಿಕೃತ ಹೇಳಿಕೆಗಳ ವಿರುದ್ಧ ವಿಪಕ್ಷಗಳು ಕಿಡಿಕಾರಿವೆ. ಈ ಕುರಿತು ಪ್ರತಿಕ್ರಿಯಿಸಿರುವ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ (NC) ಮುಖ್ಯಸ್ಥ ಹಾಗೂ ಮಾಜಿ ಮುಖ್ಯಮಂತ್ರಿ ಡಾ. ಫಾರೂಕ್ ಅಬ್ದುಲ್ಲಾ ಅವರು, ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಸಹಜ ಸ್ಥಿತಿ ಮರಳಿದೆ ಎಂದು ಹೇಳಿಕೊಳ್ಳುತ್ತಿದ್ದವರ ವಾದ ಸುಳ್ಳಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ, (ಏಜೆನ್ಸೀಸ್​).