ರಾಜ್ಯದಲ್ಲಿ ಪ್ರಜಾಪ್ರಭುತ್ವಕ್ಕೆ ಧಕ್ಕೆ ಉಂಟಾಗಿದೆ ಎಂದು ಕಿಡಿಕಾರಿರುವ ಕಲ್ಯಾಣ್ ಬ್ಯಾನರ್ಜಿ, ಪ್ರತಿಪಕ್ಷಗಳನ್ನೇ ಇಲ್ಲದಂತೆ ಇಂದಿನ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಇದೇ ವೇಳೆ, ಟಿಎಂಸಿ ಪಕ್ಷದ ಕೆಲವು ಅತೃಪ್ತ ಸಂಸದರು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಲಿದ್ದಾರೆ ಎಂಬ ವರದಿಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯ ಆಶ್ರಯ ಪಡೆಯಲು ಹವಣಿಸುತ್ತಿರುವವರಿಗೆ ಅಲ್ಲಿ ಸ್ಥಾನ ಸಿಗುವುದಿಲ್ಲ ಎಂದು ಎಚ್ಚರಿಕೆ ನೀಡುತ್ತಾ, ಟಿಎಂಸಿ ಪಕ್ಷವು ಕಾಂಗ್ರೆಸ್ ಜೊತೆ ವಿಲೀನವಾಗಲಿದೆ ಎಂಬ ವದಂತಿಗಳನ್ನು ತಳ್ಳಿಹಾಕಿದ್ದಾರೆ.