ಕಲ್ಲುಗಳ ಜತೆಗೆ ದೊಣ್ಣೆ, ಕಬ್ಬಿಣದ ರಾಡ್‌ಗಳಿಂದ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಗಲಾಟೆ ವೇಳೆ ಸರ್ಕಾರಿ ವಾಹನಗಳಿಗೂ ಹಾನಿಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಘಟನೆ ಸಂಬಂಧ ಎಸ್‌ಐ ವಿನಯ್ ಪಟೇಲ್ ದೂರು ನೀಡಿದ್ದು, ಪರಿಸ್ಥಿತಿ ನಿಯಂತ್ರಿಸಲು ಮುಂದಾದಾಗ ಯುವಕನೊಬ್ಬ ಹಿಂದಿನಿಂದ ಬಂದು, ಕೆಳಗೆ ಬೀಳಿಸಿ ಕತ್ತು ಹಿಸುಕಲು ಯತ್ನಿಸಿದ್ದಾನೆ ಎಂದು ಆರೋಪಿಸಿದ್ದಾರೆ. ಇದೇ ವೇಳೆ ಮಹಿಳೆಯೊಬ್ಬರು ಕಬ್ಬಿಣದ ಸರಪಳಿಯಿಂದ ತಮ್ಮ ತಲೆಗೆ ಹೊಡೆದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.