2023 ರ ಸೆಪ್ಟೆಂಬರ್ನಲ್ಲಿ ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ಬಗ್ಗೆ ನೀಡಿದ ಹೇಳಿಕೆಗಳು ರಾಷ್ಟ್ರಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಸಿಎಂ ಸ್ಟಾಲಿನ್ ಪುತ್ರ, ಕೆಲವು ವಿಷಯಗಳನ್ನು ವಿರೋಧಿಸಲು ಸಾಧ್ಯವಿಲ್ಲ, ಅವುಗಳನ್ನು ರದ್ದುಗೊಳಿಸಬೇಕು. ನಾವು ಡೆಂಗ್ಯೂ, ಸೊಳ್ಳೆಗಳು, ಮಲೇರಿಯಾ ಅಥವಾ ಕೊರೊನಾವನ್ನು ವಿರೋಧಿಸಲು ಸಾಧ್ಯವಿಲ್ಲ, ಅವುಗಳನ್ನು ನಿರ್ಮೂಲನೆ ಮಾಡಬೇಕು. ಅದೇ ರೀತಿ, ನಾವು ಸನಾತನವನ್ನು ವಿರೋಧಿಸುವ ಬದಲು ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು(ಏಜೆನ್ಸೀಸ್).