ಕೋಲ್ಕತ್ತಾದ ಹೋಟೆಲ್​ವೊಂದರಲ್ಲಿ ಭಾರಿ ಅಗ್ನಿ ಅವಘಡ: ಓರ್ವ ಮಗು ಸೇರಿ 9 ಮಂದಿ ಸಜೀವದಹನ: ಎಸಿ ಸ್ಪೋಟ ಶಂಕೆ | fire

ಘಟನೆಯ ಸ್ಥಳ
ಘಟನೆಯ ಸ್ಥಳ
Published on
ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತ್ತಾದ ಹೋಟೆಲ್​ವೊಂದರಲ್ಲಿ ಬುಧವಾರ(ಆ. 19) ಬೆಳಗಿನ ಜಾವ ಭಾರಿ ಅಗ್ನಿ ಅವಘಡ(fire) ಸಂಭವಿಸಿ ಭೀಕರ ದುರಂತ ನಡೆದಿದ್ದು, ಘಟನೆಯಲ್ಲಿ  ಓರ್ವ ಮಗು ಸೇರಿದಂತೆ ಕನಿಷ್ಠ 9 ಮಂದಿ ಸಜೀವದಹನವಾಗಿದ್ದು, 6 ಜನ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ನಗರದ ಅತ್ಯಂತ ಜನನಿಬಿಡ ಪ್ರದೇಶಗಳಲ್ಲಿ ಒಂದಾದ ನ್ಯೂ ಮಾರ್ಕೆಟ್ ಬಳಿಯ ಫ್ರೀ ಸ್ಕೂಲ್ ಸ್ಟ್ರೀಟ್‌ನಲ್ಲಿರುವ ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಳಗಿನ ಜಾವ 2:00 ಗಂಟೆ ಸುಮಾರಿ ಈ ಅವಘಡ ಸಂಭವಿಸಿದೆ. ಮೃತಪಟ್ಟವರೆಲ್ಲರೂ ಬಾಂಗ್ಲಾದೇಶದ ನಿವಾಸಿಗಳಾಗಿದ್ದು, ಅವರೆಲ್ಲರೂ ಚಿಕಿತ್ಸೆಗಾಗಿ ಕೋಲ್ಕತ್ತಾಗೆ ಆಗಮಿಸಿದ್ದರು ಎನ್ನಲಾಗಿದೆ.
ಪ್ರಾಥಮಿಕ ವರದಿಗಳ ಪ್ರಕಾರ ಬೆಂಕಿ ಹವಾನಿಯಂತ್ರಣ ಯಂತ್ರದ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆದರೆ ನಿಖರವಾದ ಕಾರಣ ಇನ್ನೂ ದೃಢಪಟ್ಟಿಲ್ಲ. ಬೆಂಕಿ ಅವಘಡದ ಮಾಹಿತಿ ತಿಳಿದ ತಕ್ಷಣ ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಜೊತೆಗೆ ಹೋಟೆಲ್​ನಲ್ಲಿ ಸಿಲುಕಿಕೊಂಡಿದ್ದವರನ್ನು ರಕ್ಷಿಸಿದ್ದಾರೆ.
ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯ ಹೋಟೆಲ್‌ನಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ ಸಂಭವಿಸಿದ ಕೇವಲ ಎರಡು ದಿನಗಳ ನಂತರ ಕೋಲ್ಕತ್ತಾ ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ (ಏಜೆನ್ಸೀಸ್). 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net