ಚುನಾವಣಾ ಆಯೋಗದ ವಿರುದ್ಧ ಮಮತಾ ಬ್ಯಾನರ್ಜಿ ಗರಂ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, ದೇಶಾದ್ಯಂತ ಹೋರಾಟದ ಎಚ್ಚರಿಕೆ! Mamata Banerjee

ಎಸ್‌ಐಆರ್ ಪ್ರಕ್ರಿಯೆ ಮೂಲಕ ಬಿಜೆಪಿ ಪರ ಕೆಲಸ ಮಾಡಿದೆ ಎಂದು ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಮಮತಾ ಬ್ಯಾನರ್ಜಿ ಕಿಡಿ. ರಾಜೀನಾಮೆಗೆ ಆಗ್ರಹಿಸಿ ದೇಶಾದ್ಯಂತ ಹೋರಾಟದ ಎಚ್ಚರಿಕೆ.
TMC chief Mamata Banerjee demanding CEC Gyanesh Kumar resignation
ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ
Published on: 

ಪಶ್ಚಿಮ ಬಂಗಾಳ: ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (TMC) ನಾಯಕಿ ಮಮತಾ ಬ್ಯಾನರ್ಜಿ (Mamata Banerjee) ಚುನಾವಣಾ ಆಯೋಗದ ವಿರುದ್ಧ ಮುಗಿಬಿದ್ದಿದ್ದಾರೆ. ಶ್ರೀರಾಮ್‌ಪುರದಲ್ಲಿ ನಡೆದ ಬೃಹತ್ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, 'ಎಸ್‌ಐಆರ್' ಪ್ರಕ್ರಿಯೆಯ ಮೂಲಕ ಬಿಜೆಪಿ ಪರವಾಗಿ ಚುನಾವಣಾ ಆಯೋಗ ಕೆಲಸ ಮಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಚುನಾವಣಾ ಆಯೋಗದ ಕುರಿತಾದ ಇತ್ತೀಚಿನ ವರದಿಯನ್ನು ಉಲ್ಲೇಖಿಸಿದ ಅವರು, ಬಿಜೆಪಿ ಹೇಗೆ ಆಯೋಗವನ್ನು ತನ್ನ ಸ್ವಾರ್ಥಕ್ಕಾಗಿ ದುರುಪಯೋಗಪಡಿಸಿಕೊಂಡಿದೆ ಎಂಬ ಸತ್ಯ ಈಗ ಹೊರಬಂದಿದೆ ಎಂದು ಕಿಡಿಕಾರಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿರುವ ಮಮತಾ, ಅವರು ಕೆಳಗಿಳಿಯುವವರೆಗೂ ದೇಶಾದ್ಯಂತ ಉಗ್ರ ಪ್ರತಿಭಟನೆಗಳು ಮುಂದುವರಿಯಲಿವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಮುರ್ಷಿದಾಬಾದ್ ಉಪಚುನಾವಣೆ ಹಾಗೂ ಸರ್ಕಾರದ ವಿರುದ್ಧ ಆಕ್ರೋಶ

ಮುರ್ಷಿದಾಬಾದ್ ಜಿಲ್ಲೆಯ ರೆಜಿನಗರ್ ಕ್ಷೇತ್ರದಲ್ಲಿ ನಡೆಯಲಿರುವ ಉಪಚುನಾವಣೆಯ ಬಗ್ಗೆ ಪ್ರಸ್ತಾಪಿಸಿದ ಮಮತಾ ಬ್ಯಾನರ್ಜಿ, ರಾಜ್ಯದ ಪೊಲೀಸರು ಆಡಳಿತಾರೂಢ ಬಿಜೆಪಿಯ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಅಲ್ಪಸಂಖ್ಯಾತ ಸಮುದಾಯದ ಜನರನ್ನು ಗುರಿಯಾಗಿಸಿಕೊಂಡು ಅವರ ಮತದಾರರ ಗುರುತಿನ ಚೀಟಿಗಳನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.

ಪೊಲೀಸರು ನನ್ನ ಶತ್ರುಗಳಲ್ಲ, ಜನರನ್ನು ರಕ್ಷಿಸುವುದು ಅವರ ಕೆಲಸ. ಆದರೆ ನಿನ್ನೆ ರಾತ್ರಿ ಯಾರೂ ನನ್ನ ರ್ಯಾಲಿಗೆ ಬರದಂತೆ ತಡೆಯಲು ಶ್ರೀರಾಮಪುರದಲ್ಲಿ ನಮ್ಮ ಬೆಂಬಲಿಗರನ್ನು ಅವರ ಮನೆಗಳಿಗೇ ನುಗ್ಗಿ ಬಂಧಿಸಿದ್ದಾರೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Also Read
ಅಂದು ಸಚಿನ್ ಜೊತೆ ವಿಶ್ವ ದಾಖಲೆ, ಇಂದು ವೃದ್ಧಾಶ್ರಮದಲ್ಲಿ ಒಂಟಿ ಬದುಕು: ಕಣ್ಣೀರಿಟ್ಟ ವಿನೋದ್ ಕಾಂಬ್ಳಿ ವೈರಲ್ ವಿಡಿಯೋ! Vinod Kambli
TMC chief Mamata Banerjee demanding CEC Gyanesh Kumar resignation

'ಇಂಡಿಯಾ' ಮೈತ್ರಿಕೂಟದ ಮುಂದಿನ ರಣತಂತ್ರವೇನು?

ಚುನಾವಣಾ ಆಯೋಗದ ವಿವಾದಾತ್ಮಕ ಕಾರ್ಯವೈಖರಿಯನ್ನು ಎದುರಿಸಲು ಮತ್ತು ವಿರೋಧ ಪಕ್ಷಗಳ ಮುಂದಿನ ಕಾರ್ಯತಂತ್ರವನ್ನು ರೂಪಿಸಲು 'ಇಂಡಿಯಾ' (INDIA) ಮೈತ್ರಿಕೂಟದ ಸಭೆಯನ್ನು ದೆಹಲಿಯಲ್ಲಿ ನಡೆಸಲು ಸಿದ್ಧತೆ ನಡೆಸಿದೆ. ಈ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಸಿಪಿಐಎಂ (CPIM) ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ ಅವರೊಂದಿಗೆ ತಾವು ಮಾತನಾಡಿರುವುದಾಗಿ ಮಮತಾ ತಿಳಿಸಿದ್ದಾರೆ.

ಸೆಪ್ಟೆಂಬರ್ 30 ರಂದು ದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್‌ನಲ್ಲಿ 'ಇಂಡಿಯಾ' ಮೈತ್ರಿಕೂಟದ ಮಹತ್ವದ ಸಭೆ ನಡೆಯುವ ಸಾಧ್ಯತೆಯಿದೆ. ಈ ಕುರಿತು ಮಾತನಾಡಿದ ಅವರು, ನಾವು ಒಗ್ಗಟ್ಟಿನಿಂದ ಕುಳಿತು ಚರ್ಚಿಸಬೇಕು. ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸಲು ಯಾರು ಯಾವ ಪಕ್ಷದವರು ಎಂದು ನೋಡದೆ ನಾವೆಲ್ಲರೂ ಒಟ್ಟಾಗಿ ಹೆಗಲಿಗೆ ಹೆಗಲು ಕೊಟ್ಟು ಹೋರಾಡುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ, (ಏಜೆನ್ಸೀಸ್​).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net