ರಾಜ್ಯದಲ್ಲಿ ಮತಪಟ್ಟಿಯಿಂದ 27 ಲಕ್ಷ ಹೆಸರು ಡಿಲೀಟ್ ಆಗಲು ಮಮತಾ ಬ್ಯಾನರ್ಜಿಯವರೇ ಕಾರಣ; ಸಿಎಂ ಸುವೇಂದು ಅಧಿಕಾರಿ | Suvendu Adhikari

ಪಶ್ಚಿಮ ಬಂಗಾಳದಲ್ಲಿ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್​ಐಆರ್) ಪ್ರಕ್ರಿಯೆಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ 27 ಲಕ್ಷ ಹೆಸರುಗಳನ್ನು ಕೈಬಿಟ್ಟಿರುವುದಕ್ಕೆ ಬಿಜೆಪಿ ಮತ್ತು ಚುನಾವಣೆ ಆಯೋಗ ಹೊಣೆಯಲ್ಲ, ಮಮತಾ ಬ್ಯಾನರ್ಜಿ ಅವರೇ ಕಾರಣ ಎಂದು ಸಿಎಂ ಸುವೇಂದು ಅಧಿಕಾರಿ ಆರೋಪಿಸಿದ್ದಾರೆ.
 Suvendu Adhikari
ಮಮತಾ ಬ್ಯಾನರ್ಜಿ ಮತ್ತು ಸಿಎಂ ಸುವೇಂದು ಅಧಿಕಾರಿ
Published on: 

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್​ಐಆರ್) ಪ್ರಕ್ರಿಯೆಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ 27 ಲಕ್ಷ ಹೆಸರುಗಳನ್ನು ಕೈಬಿಟ್ಟಿರುವುದಕ್ಕೆ ಬಿಜೆಪಿ ಮತ್ತು ಚುನಾವಣೆ ಆಯೋಗ ಹೊಣೆಯಲ್ಲ, ಮಮತಾ ಬ್ಯಾನರ್ಜಿ ಅವರೇ ಕಾರಣ ಎಂದು ಸಿಎಂ ಸುವೇಂದು ಅಧಿಕಾರಿ ಆರೋಪಿಸಿದ್ದಾರೆ.

ಕೋಲ್ಕತ್ತಾದಲ್ಲಿ ಭಾನುವಾರ(ಸೆ. 27) ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಅವರು, ಮತಪಟ್ಟಿಯಿಂದ 27 ಲಕ್ಷ ಹೆಸರುಗಳನ್ನು ಖುದ್ದು ಮಮತಾ ಬ್ಯಾನರ್ಜಿ ಅವರೇ ದಾಖಲಿಸಿದ್ದ ಪ್ರಕರಣವೊಂದರಲ್ಲಿ ಸುಪ್ರೀಂಕೋರ್ಟ್ ನೀಡಿದ ನಿರ್ದೇಶನಗಳ ಅನ್ವಯ ನ್ಯಾಯಾಂಗ ಅಧಿಕಾರಿಗಳು ಡಿಲಿಟ್ ಮಾಡಿದ್ದಾರೆ ಎಂದು ಹೇಳಿದ್ದಾರೆ.

Also Read
ರಾಹುಲ್ ಗಾಂಧಿ ದೇಶದಲ್ಲಿ ಅರಾಜಕತೆ ಮತ್ತು ಅವ್ಯವಸ್ಥೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆ; ಸಿಎಂ ದೇವೇಂದ್ರ ಫಡ್ನವೀಸ್ ಆಕ್ರೋಶ | Devendra Fadnavis
 Suvendu Adhikari

ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ವಿರೋಧಿಸುತ್ತಿರುವ ಬಗ್ಗೆ ಪ್ರಶ್ನಿಸಿದ ಅಧಿಕಾರಿ, ಜನರ ತೀರ್ಪನ್ನು ಒಪ್ಪಿಕೊಳ್ಳಲು ಬ್ಯಾನರ್ಜಿ ನಿರಾಕರಿಸುತ್ತಿದ್ದಾರೆ. ಕೇರಳದಲ್ಲಿ ಎಸ್‌ಐಆರ್ ಉತ್ತಮವಾಗಿದ್ದರೆ, ಪಶ್ಚಿಮ ಬಂಗಾಳದಲ್ಲಿ ಅದು ಏಕೆ ಕೆಟ್ಟದಾಗಿದೆ? ನಾವು 208 ಸ್ಥಾನಗಳನ್ನು ಗೆದ್ದಿದ್ದೇವೆ, ಆದರೆ ಟಿಎಂ 80 ಸ್ಥಾನಗಳನ್ನು ಹೊಂದಿವೆ. ಮಮತಾ ಬ್ಯಾನರ್ಜಿ ಅವರಿಗೆ ಜನರ ತೀರ್ಪನ್ನು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

ಇನ್ನೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರ ನಡುವೆ ಶನಿವಾರ ನಡೆದ ಸಭೆಯ ಬಗ್ಗೆ ಪ್ರಸ್ತಾಪಿಸಿದ ಅಧಿಕಾರಿ, ಆ ಸಭೆ ಮತ್ತು ನಂತರ ಚುನಾವಣಾ ಆಯೋಗ ನೀಡಿದ ಹೇಳಿಕೆಯು, ಬಂಗಾಳದ ಎಸ್‌ಐಆರ್ ಕುರಿತ ನಿರ್ಧಾರಗಳನ್ನು ಕೇವಲ ಮುಖ್ಯ ಚುನಾವಣಾ ಆಯುಕ್ತರು ಮಾತ್ರ ತೆಗೆದುಕೊಂಡಿರಲಿಲ್ಲ ಎಂಬುದನ್ನು ತೋರಿಸಿಕೊಟ್ಟಿದೆ ಎಂದು ತಿಳಿಸಿದ್ದಾರೆ (ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net