ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಮಮತಾ, ಬಂಗಾಳದ ವಿಧಾನಸಭಾ ಚುನಾವಣೆಗೆ ಮುನ್ನ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಜನರ ಪ್ರಜಾಪ್ರಭುತ್ವದ ಹಕ್ಕುಗಳನ್ನು ಕಸಿದುಕೊಳ್ಳುವ ಸಂಚು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಚುನಾವಣಾ ಆಯೋಗವು ತನ್ನ ಯಜಮಾನನ ಧ್ವನಿಯನ್ನು ಪ್ರತಿಧ್ವನಿಸುತ್ತಿದೆ. ಮತದಾನದ ಹಕ್ಕನ್ನು ರಕ್ಷಿಸಬೇಕಾದವರು ಅದನ್ನು ಕಿತ್ತುಕೊಳ್ಳುವ ಕೆಲಸದಲ್ಲಿ ನಿರತರಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಇವರಿಗೆ ಮತದಾರರ ದಿನವನ್ನು ಆಚರಿಸುವ ಧೈರ್ಯ ಎಲ್ಲಿಂದ ಬರುತ್ತದೆ? ಎಂದು ಪ್ರಶ್ನಿಸಿದ್ದಾರೆ.