ಅಷ್ಟೇ ಅಲ್ಲದೆ, ವಿವಿಧ ಬ್ಯಾಂಕ್ ಖಾತೆಗಳಿಗೆ ಸಂಬಂಧಿಸಿದಂತೆ ಟಿಎಂಸಿ ಮತ್ತು ಅದಕ್ಕೆ ಸಂಯೋಜಿತವಾಗಿರುವ ಇತರ ಸಂಸ್ಥೆಗಳ ಅಧಿಕೃತ ಸಹಿದಾರರ ಸ್ಥಾನದಿಂದ ಹಾಗೂ ಭಾರತೀಯ ಚುನಾವಣಾ ಆಯೋಗದ ಮುಂದೆ ಪಕ್ಷದ ಅಧಿಕೃತ ಪ್ರತಿನಿಧಿಯಾಗಿದ್ದ ಜವಾಬ್ದಾರಿಯಿಂದಲೂ ನಾನು ಹಿಂದೆ ಸರಿಯುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ, ಪತ್ರದ ಕೊನೆಯಲ್ಲಿ ಮಮತಾ ಬ್ಯಾನರ್ಜಿ ಅವರ ಮೇಲಿರುವ ಗೌರವ ಸದಾ ಇರಲಿದೆ ಎಂದು ಉಲ್ಲೇಖಿಸಿದ್ದಾರೆ(ಏಜೆನ್ಸೀಸ್).