ಅಭಿಷೇಕ್ ಬ್ಯಾನರ್ಜಿ ಮೇಲಿನ ದಾಳಿಗೆ ಸಂಬಂಧಿಸಿದಂತೆ ಸೋನಾರ್ಪುರ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿದ್ದು, ಐವರು ಸ್ಥಳೀಯ ನಿವಾಸಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಆಕಾಶ್ ಗಯಾನ್, ಕಾಜಲ್ ದಾಸ್, ದೇಬಾಶಿಶ್ ದತ್ತಾ, ನಿರ್ಮಾಲ್ಯ ಸೇನ್ಗುಪ್ತಾ ಮತ್ತು ತಪನ್ ಮೈತಿ ಎಂದು ಗುರುತಿಸಲಾಗಿದೆ. ಇವರನ್ನು ಬರುಯಿಪುರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಪಶ್ಚಿಮ ಬಂಗಾಳ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.