ರಾಮ ಮಂದಿರ ಆವರಣದಲ್ಲಿ ನಮಾಜ್ ಮಾಡಲು ಯತ್ನಿಸಿದ ವ್ಯಕ್ತಿ ಅರೆಸ್ಟ್​​! Ayodhya

 Ayodhya
Ayodhya
Published on
ಉತ್ತರಪ್ರದೇಶ: ( Ayodhya) ಅಯೋಧ್ಯೆಯ ರಾಮ ಮಂದಿರ ಆವರಣದೊಳಗೆ ನಮಾಜ್ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧಿತ ಯುವಕ ಕಾಶ್ಮೀರದವನು ಎಂದು ಮೂಲಗಳು ತಿಳಿಸಿವೆ.
ಅಯೋಧ್ಯೆ ರಾಮ ಮಂದಿರ ಆವರಣದೊಳಗೆ ನಮಾಜ್ ಮಾಡಲು ಯತ್ನಿಸುತ್ತಿದ್ದನು. ಪೊಲೀಸರು ತಡೆದಾಗ, ಆ ವ್ಯಕ್ತಿ ಧರ್ಮಾಂಧರ ಪರ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದನು. ಆ ಯುವಕನನ್ನು ಕಾಶ್ಮೀರದ ಶೋಪಿಯಾನ್ ನಿವಾಸಿ ಅಹ್ಮದ್ ಶೇಖ್ ಎಂದು ಗುರುತಿಸಲಾಗಿದೆ .

ನಡೆದಿದ್ದೇನು?

ಅಹ್ಮದ್ ಶೇಖ್, ಗೇಟ್ ಡಿ -1 ಮೂಲಕ ದೇವಾಲಯವನ್ನು ಪ್ರವೇಶಿಸಿದ್ದಾನೆ. ರಾಮ ಮಂದಿರ ದಕ್ಷಿಣದ ಗೋಡೆ ಮುಂದೆ ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಕೆಲವರು ಅವನನ್ನು ಗಮನಿಸಿದರು. ಭದ್ರತಾ ಸಿಬ್ಬಂದಿ ಅವನನ್ನು ತಡೆಯಲು ಪ್ರಯತ್ನಿಸಿದರು. ಗದ್ದಲದ ನಂತರ, ಭದ್ರತಾ ಪಡೆಗಳು ಯುವಕನನ್ನು ವಶಕ್ಕೆ ಪಡೆದಿವೆ.
ಭದ್ರತಾ ಸಿಬ್ಬಂದಿ ಯುವಕನನ್ನು ತಡೆದಾಗ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದ ಎಂದು ಹೇಳಲಾಗಿದ್ದು, ನಂತರ ಸ್ಥಳದಲ್ಲಿದ್ದ ಭದ್ರತಾ ಪಡೆಗಳು ಆತನನ್ನು ವಶಕ್ಕೆ ಪಡೆದಿವೆ. ಘಟನೆಯ ಬಗ್ಗೆ ಗುಪ್ತಚರ ಸಂಸ್ಥೆಗಳು, ಸ್ಥಳೀಯ ಪೊಲೀಸರು ಮತ್ತು ಹಿರಿಯ ಆಡಳಿತ ಅಧಿಕಾರಿಗಳಿಗೆ ತಕ್ಷಣವೇ ಮಾಹಿತಿ ನೀಡಲಾಯಿತು. ಯುವಕನನ್ನು ವಿಚಾರಣೆ ನಡೆಸಲಾಗುತ್ತಿದೆ. ಆತನ ಕೃತ್ಯದ ಹಿಂದಿನ ಉದ್ದೇಶವನ್ನು ನಿರ್ಧರಿಸಲು ಗುಪ್ತಚರ ಸಂಸ್ಥೆಗಳು, ಪೊಲೀಸರು ಮತ್ತು ಹಿರಿಯ ಅಧಿಕಾರಿಗಳು ಬಂಧಿತ ಯುವಕನನ್ನು ವಿಚಾರಣೆ ನಡೆಸುತ್ತಿದ್ದಾರೆ.
ದೇವಾಲಯದ ಆವರಣದಲ್ಲಿ ನಮಾಜ್ ಮಾಡಿದ ಘಟನೆಯ ನಂತರ, ಪೊಲೀಸರು ಕಾರ್ಯಪ್ರವೃತ್ತರಾದರು. ನಗರದಲ್ಲಿ ಕಾಶ್ಮೀರಿ ಶಾಲುಗಳನ್ನು ಮಾರಾಟ ಮಾಡುತ್ತಿದ್ದ ಜನರನ್ನು ಸಹ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ . ಈ ಘಟನೆ ಇಂದು ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ಆದಾಗ್ಯೂ, ರಾಮ ಮಂದಿರ ಟ್ರಸ್ಟ್ ಈ ವಿಷಯದ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net