ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ; ಏಳು ಮಂದಿ ಸಜೀವ ದಹನ: ಹಲವರಿಗೆ ಗಂಭೀರ ಗಾಯ | firecracker factory
ಘಟನೆಯ ಸ್ಥಳ
Published on:
Copied
Follow Us
ಜೈಪುರ: ರಾಜಸ್ಥಾನದ ಜೈಪುರದ ಖೋಹ್ ನಾಗೋರಿಯನ್ ಎಂಬಲ್ಲಿ ಮಂಗಳವಾರ(ಜೂ. 08) ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ(firecracker factory) ಭೀಕರ ಸ್ಫೋಟ ಸಂಭವಿಸಿದ್ದು, ಅವಘಡದಲ್ಲಿ ಕನಿಷ್ಠ ಏಳು ಮಂದಿ ಸಜೀವದಹನಗೊಂಡಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಖೋಹ್ ನಾಗೋರಿಯನ್‌ನ ಆಯೇಷಾ ನಗರ ತಲೈ ಕಾಲೋನಿಯಲ್ಲಿರುವ ಸಣ್ಣ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಲ್ಲಿ ಪಟಾಕಿಗಳನ್ನು ಸಂಗ್ರಹಿಸಲಾಗಿತ್ತು ಎನ್ನಲಾಗಿದೆ. ಘಟನೆಯ ಮಾಹಿತಿ ಬಂದ ತಕ್ಷಣ ಅಗ್ನಿಶಾಮಕ ದಳ ಮತ್ತು ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ.
ಅಗ್ನಿಶಾಮಕ ದಳದ ತಂಡಗಳು ಬರುವ ಮೊದಲೇ ಸ್ಥಳೀಯರು ಒಳಗೆ ಸಿಲುಕಿದ್ದವರನ್ನು ರಕ್ಷಿಸಿದ್ದು, ಮತ್ತು ಬೆಂಕಿಯನ್ನು ನಿಯಂತ್ರಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ತೀವ್ರವಾಗಿ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ.
ಘಟನೆ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸಿದ್ದಾರೆ (ಏಜೆನ್ಸೀಸ್).