ಎಸಿ ಸ್ಪೋಟಕ್ಕೆ ನಲುಗಿದ ದೆಹಲಿ: ಬೆಂಕಿಯ ಜ್ವಾಲೆಗೆ 9 ಜೀವಗಳು ಭಸ್ಮ; ರಕ್ಷಣಾ ಕಾರ್ಯಾಚರಣೆ ಚುರುಕು! Fire Accident

ನಾಲ್ಕು ಅಂತಸ್ತಿನ ವಸತಿ ಕಟ್ಟಡದಲ್ಲಿ ಎಸಿ ಸ್ಪೋಟ (Fire Accident ಸಾಂದರ್ಭಿಕ ಚಿತ್ರ)
ನಾಲ್ಕು ಅಂತಸ್ತಿನ ವಸತಿ ಕಟ್ಟಡದಲ್ಲಿ ಎಸಿ ಸ್ಪೋಟ (Fire Accident ಸಾಂದರ್ಭಿಕ ಚಿತ್ರ)
Published on
ನವದೆಹಲಿ: ಇಲ್ಲಿನ ವಿವೇಕ್ ವಿಹಾರ್​ನಲ್ಲಿರುವ ನಾಲ್ಕು ಅಂತಸ್ತಿನ ವಸತಿ ಕಟ್ಟಡವೊಂದರಲ್ಲಿ ಬೆಳ್ಳಂ ಬೆಳಗ್ಗೆ (ಮೇ.03) ಎಸಿ ಸ್ಪೋಟಗೊಂಡ ಪರಿಣಾಮ ಒಂಬತ್ತು (Fire Accident) ಜನ ಮೃತಪಟ್ಟಿದ್ದು, 20 ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ.
ಬೆಂಕಿಯನ್ನು ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿ ನಂದಿಸಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಇನ್ನೂ ಚುರುಕಿನಿಂದ ಸಾಗುತ್ತಿದೆ ಎಂದು ಹೇಳಿದ್ದಾರೆ.
ಘಟನೆ ಕುರಿತು ಶಹದಾರಾ ಜಿಲ್ಲಾ ಡಿಸಿಪಿ ರಾಜೇಂದ್ರ ಪ್ರಸಾದ್ ಮೀನಾ ಮಾತನಾಡಿದ್ದು, 2, 3 ಮತ್ತು 4 ನೇ ಮಹಡಿಯಲ್ಲಿರುವ ಫ್ಲಾಟ್‌ಗಳಲ್ಲಿ ಬೆಂಕಿ ಕಂಡುಬಂದಿದೆ. ಈ ವೇಳೆ ಕಾರ್ಯಾಚಾರಣೆ ನಡೆಸಿ 10-15 ಜನರನ್ನು ಕಟ್ಟಡದಿಂದ ರಕ್ಷಿಸಲಾಯಿತು. ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿಸಿದ್ದಾರೆ.

ಸ್ಥಳದಲ್ಲಿ ತುರ್ತು ತಂಡಗಳು

ಬೆಂಕಿಯ ಬಗ್ಗೆ ವರದಿಯಾದ ಕೂಡಲೇ ತುರ್ತು ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಕಟ್ಟಡದಲ್ಲಿ ಸಿಲುಕಿದ್ದ 10 ಜನರನ್ನು ಸುರಕ್ಷಿತವಾಗಿ ಹೊರಕ್ಕೆ ಕರೆತಂದಿದ್ದಾರೆ. ದಟ್ಟ ಹೊಗೆಯಿಂದಾಗಿ ರಕ್ಷಿಸಲ್ಪಟ್ಟವರು ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಅವರೆಲ್ಲರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಕುರಿತು ಸದ್ದಿ ಮೂಲಗಳೊಂದಿಗೆ ಮಾತನಾಡಿದ ಪುರಸಭೆ ಸದಸ್ಯ ಪಂಕಜ್ ಲೂತ್ರಾ, ಮಾಹಿತಿ ಸ್ವೀಕರಿಸಿದ ಕೂಡಲೇ ಸ್ಥಳಕ್ಕೆ ಆಗಮಿಸಿ ಮಹಡಿ ಮೇಲೆ ನೇರವಾಗಿ ಹೋದೆ. ಎರಡನೇ ಮಹಡಿಯ ಹಿಂಭಾಗದಲ್ಲಿ, ಐದು ಶವಗಳು ಪತ್ತೆಯಾಗಿವೆ ಇನ್ನೊಂದು ಕಡೆ 4 ಶವಗಳು ಪತ್ತೆಯಾಗಿದೆ ಎಂದು ಹೇಳಿದರು.
ಆದಾಗ್ಯೂ, ನಾವು ಹೆಚ್ಚಿನ ತಪಾಸಣೆಗಳನ್ನು ನಡೆಸುತ್ತಿದ್ದೇವೆ, ಆದರೆ ಡಿಎನ್ಎ ಪರೀಕ್ಷೆ ನಡೆಯುವವರೆಗೆ, ಬಲಿಪಶುಗಳ ಲಿಂಗವನ್ನು ನಿರ್ಧರಿಸಲು ಸಾಧ್ಯವಾಗುವುದಿಲ್ಲ. ಅಪಘಾತಕ್ಕೆ ನಿಖರವಾದ ಕಾರಣ ಈವರೆಗೂ ತಿಳಿದುಬಂದಿಲ್ಲ ಎಂದು ಹೇಳಿದ್ದಾರೆ.

ಪಂಜಾಬಿ ಬಾಗ್ ಮೆಟ್ರೋ ನಿಲ್ದಾಣದ ಬಳಿ ಬೆಂಕಿ ಅವಘಡ

ದೆಹಲಿಯ ಪಂಜಾಬಿ ಬಾಗ್ ಮೆಟ್ರೋ ನಿಲ್ದಾಣದ ಬಳಿಯ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡ ಸ್ವಲ್ಪ ದಿನಗಳ ನಂತರ ಈ ಘಟನೆ ಸಂಭವಿಸಿದೆ. ಅಧಿಕಾರಿಗಳ ಪ್ರಕಾರ, ತಕ್ಷಣವೇ ಹಲವಾರು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಿ ಸಿಬ್ಬಂದಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಗಳು ನಡೆದವು (ಏಜೆನ್ಸೀಸ್​).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net