ಶಾಲೆಯ ಬ್ಯಾಗುಗಳಲ್ಲಿ, ಗಲ್ಲಿಯ ಕಿರಾಣಿ ಅಂಗಡಿಗಳಲ್ಲಿ ಚಿಲ್ಲರೆ ಕಾಸಿಗೆ ಸಿಗುತ್ತಿದ್ದ ಈ 1 ರೂಪಾಯಿಯ ಸಾಮಾನ್ಯ ಚಾಕೊಲೇಟ್, ಇಂದು ಇಂಟರ್ನೆಟ್ ಜಗತ್ತಿನ ಅತ್ಯಂತ ಜನಪ್ರಿಯ ರಾಜಕೀಯ ಮೀಮ್ (Meme) ಆದ ಮೆಲೋಡಿ (Melodi) ಗೆ ಅಧಿಕೃತ ಮುದ್ರೆ ಒತ್ತಿದೆ. ಹೌದು, ರೋಮ್‌ನಲ್ಲಿ ನಡೆದ ದ್ವಿಪಕ್ಷೀಯ ಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಗೆ ಭಾರತದ ಹೆಮ್ಮೆಯ ಮೆಲೊಡಿ ಟಾಫಿಗಳನ್ನು ಉಡುಗೊರೆಯಾಗಿ ನೀಡಿದ್ದು ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದೆ.