ಜನಗಣತಿ ಮತ್ತು ಕ್ಷೇತ್ರ ಪುನರ್ವಿಂಗಡಣೆಯ ನಂತರವಷ್ಟೇ ಮಹಿಳಾ ಮೀಸಲಾತಿ ಜಾರಿಗೆ ಬರಬೇಕೆಂಬ ನಿಬಂಧನೆಯನ್ನು ಪ್ರಸ್ತುತ ಕಾಯ್ದೆ ಒಳಗೊಂಡಿದ್ದರೂ, ಸರ್ಕಾರವು ಈಗ ಈ ಪ್ರಕ್ರಿಯೆಯನ್ನು ಜನಗಣತಿಯಿಂದ ಬೇರ್ಪಡಿಸಲು ಮುಂದಾಗಿದೆ ಎಂದು ರಮೇಶ್ ಟೀಕಿಸಿದ್ದು, ಈ ಹಿಂದೆ ಸಂಸತ್ತಿನಲ್ಲಿ ಮತ್ತು ಸುಪ್ರೀಂ ಕೋರ್ಟ್ನಲ್ಲಿ ಅಫಿಡವಿಟ್ ಸಲ್ಲಿಸುವ ಮೂಲಕ ಜಾತಿ ಜನಗಣತಿ ನಡೆಸದಿರುವುದು ಸರ್ಕಾರದ ನೀತಿ ನಿರ್ಧಾರ ಎಂದು ಹೇಳಲಾಗಿತ್ತು. ಆದರೆ ಈಗ ಅನಿರೀಕ್ಷಿತವಾಗಿ ಜನಗಣತಿಯ ಭಾಗವಾಗಿ ಜಾತಿ ಎಣಿಕೆ ಮಾಡಲಾಗುವುದು ಎಂದು ಸರ್ಕಾರ ಘೋಷಿಸಿರುವುದು ರಾಜಕೀಯ ಲಾಭಕ್ಕಾಗಿ ಎಂದು ಕಾಂಗ್ರೆಸ್ ಆರೋಪಿಸಿದೆ.