ಈ ಭೇಟಿಯ ಅತ್ಯಂತ ಪ್ರಮುಖ ಬೆಳವಣಿಗೆಯಾಗಿ, ಉನ್ನತ ಗುಣಮಟ್ಟದ ಮತ್ತು ಹೈಟೆಕ್ ಆರೋಗ್ಯ ಸೇವೆಗಳ ಅಭಿವೃದ್ಧಿಗಾಗಿ ಉಭಯ ದೇಶಗಳು ತಿಳುವಳಿಕಾ ಪತ್ರಕ್ಕೆ (MoU) ಸಹಿ ಹಾಕಿವೆ. ಡಿಜಿಟಲ್ ಹೆಲ್ತ್, ಕೃತಕ ಬುದ್ಧಿಮತ್ತೆ, ವೈದ್ಯಕೀಯ ಸಂಶೋಧನೆ ಮತ್ತು ಹೆಲ್ತ್ ಟೆಕ್ನಾಲಜಿ ವಲಯದಲ್ಲಿ ಭಾರತ ಮತ್ತು ನಾರ್ವೆ ಅತ್ಯಂತ ನಿಕಟವಾಗಿ ಕೆಲಸ ಮಾಡಲಿವೆ. ಇದರೊಂದಿಗೆ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ಮತ್ತು ಡಿಜಿಟಲ್ ಸಾರ್ವಜನಿಕ ಸರಕುಗಳ ಅಭಿವೃದ್ಧಿಯಲ್ಲಿ ಸಹಕಾರವನ್ನು ಮತ್ತಷ್ಟು ತೀವ್ರಗೊಳಿಸಲು ಉಭಯ ನಾಯಕರು ಐತಿಹಾಸಿಕ ನಿರ್ಧಾರ ಕೈಗೊಂಡಿದ್ದಾರೆ,(ಏಜೆನ್ಸೀಸ್).