ಬೃಹತ್ ಮುಂಬೈ ನಗರ ಪಾಲಿಕೆ ಚುನಾವಣೆ; ಏಕಾಂಗಿಯಾಗಿ ಸ್ಫರ್ಧಿಸುವುದಾಗಿ ಘೋಷಿಸಿದ ಕಾಂಗ್ರೆಸ್ | Congress
ಸಾಂದರ್ಭಿಕ ಚಿತ್ರ
Published on:
Copied
Follow Us
ಮುಂಬೈ: ಮುಂಬರುವ ಮಹಾರಾಷ್ಟ್ರ ರಾಜಧಾನಿ ಮತ್ತು ದೇಶದ ಅತಿದೊಡ್ಡ ಆರ್ಥಿಕ ರಾಜಧಾನಿ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಶನಿವಾರ(ಡಿ. 20) ಕಾಂಗ್ರೆಸ್(Congress) ಘೋಷಣೆ ಮಾಡಿದೆ.
ಈ ಕುರಿತು ಮುಂಬೈನಲ್ಲಿ ಎಎನ್ಐ ಜೊತೆ ಮಾತನಾಡಿರುವ ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿ ರಮೇಶ್ ಚೆನ್ನಿತಲ್, ನಾವೆಲ್ಲರೂ ಬಿಎಂಸಿ ಚುನಾವಣೆಗೆ ಸಿದ್ಧರಿದ್ದೇವೆ. ನಾನು ಸಭೆಯಲ್ಲಿ ಭಾಗವಹಿಸಲು ಬಂದಿದ್ದೇನೆ. ಕಾಂಗ್ರೆಸ್ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.
ಇನ್ನೊಂದೆಡೆ ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ಅವರ ಸಹೋದರ ಸಂಬಂಧಿ ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಮೈತ್ರಿ ಬಗ್ಗೆ ಮುಂದಿನ ವಾರ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆಯಿದೆ. ಶಿವಸೇನಾ ವಿಭಜನೆ ಬಳಿಕ ಉದ್ಧವ್ ಠಾಕ್ರೆಗೆ ಬಿಎಂಸಿಯಲ್ಲಿ ಹಿಡಿತ ಸಾಧಿಸುವುದು ರಾಜಕೀಯವಾಗಿ ಮುಖ್ಯವಾಗಿದೆ ಎನ್ನಲಾಗಿದೆ.
ಮಹಾರಾಷ್ಟ್ರ ವಿಪಕ್ಷಗಳ ಮಹಾ ವಿಕಾಸ್ ಅಘಾಡಿಯಲ್ಲಿ ಕಾಂಗ್ರೆಸ್, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ ಹಾಗೂ ಶರದ್ ಪವಾರ್ ನೇತೃತ್ವದ ಎನ್ಸಿಪಿ ನಡುವೆ ಮೈತ್ರಿಕೂಟ ಏರ್ಪಟ್ಟಿದೆ. ಆದರೆ ಮುಂದಿನ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಎಲ್ಲ ಪಕ್ಷಗಳು ನಿರ್ಧರಿಸಿವೆ.
ಬಿಎಂಸಿಯ 29 ಪುರಸಭೆ ನಿಗಮಗಳು, 32 ಜಿಲ್ಲಾ ಪರಿಷತ್ಗಳು ಮತ್ತು 336 ಪಂಚಾಯತ್ ಸಮಿತಿಗಳಿಗೆ ಜನವರಿ 15 ರಂದು ಮತದಾನ ನಡೆಯಲಿದ್ದು, ಮರುದಿನ ಜನವರಿ 16ರಂದು ಫಲಿತಾಂಶ ಘೋಷಣೆಯಾಗಲಿದೆ (ಏಜೆನ್ಸೀಸ್).