ಐದನೇ ಬಾರಿ ಪುದುಚೇರಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಎನ್.ರಂಗಸ್ವಾಮಿ | N. Rangaswamy

ಸಿಎಂ ಆಗಿ ಎನ್.ರಂಗಸ್ವಾಮಿ ಪ್ರಮಾಣವಚನ ಸ್ವೀಕರಿಸುತ್ತಿರುವುದು.
ಸಿಎಂ ಆಗಿ ಎನ್.ರಂಗಸ್ವಾಮಿ ಪ್ರಮಾಣವಚನ ಸ್ವೀಕರಿಸುತ್ತಿರುವುದು.
Published on
ಚೆನ್ನೈ: ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಸತತ ಎರಡನೇ ಬಾರಿ ಅಧಿಕಾರ ಉಳಿಸಿಕೊಂಡಿರುವ ಎನ್​ಡಿಎ ಕೂಟ, ಇಂದು(ಮೇ 13) ಐದನೇ ಬಾರಿ ಮುಖ್ಯಮಂತ್ರಿಯಾಗಿ ಅಖಿಲ ಭಾರತ ಎನ್.ಆರ್.ಕಾಂಗ್ರೆಸ್ ಮುಖ್ಯಸ್ಥ ಎನ್.ರಂಗಸ್ವಾಮಿ(N Rangaswamy) ಪ್ರಮಾಣವಚನ ಸ್ವೀಕರಿಸಿದ್ದಾರೆ.
ಲೆಫ್ಟಿನೆಂಟ್ ಗವರ್ನರ್ ಕೆ. ಕೈಲಾಶ್ನಾಥನ್ ಅವರು ಸಿಎಂ ಮತ್ತು ಅವರ ಸಂಪುಟ ಸಹೋದ್ಯೋಗಿಗಳಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದ್ದು, ರಂಗಸಾಮಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಪ್ರಾದೇಶಿಕ ಪಕ್ಷದ ಮಲ್ಲಾಡಿ ಕೃಷ್ಣ ರಾವ್ ಮತ್ತು ಬಿಜೆಪಿಯ ಎ. ನಮಶ್ವಿವಾಯಂ ಎಂಬ ಇಬ್ಬರು ಸಂಪುಟ ಸದಸ್ಯರು ಸಹ ಎಐಎನ್‌ಆರ್‌ಸಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ವೇದಿಕೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಮತ್ತು ಹಿರಿಯ ನಾಯಕ ಬಿ.ಎಲ್. ಸಂತೋಷ್ ಉಪಸ್ಥಿತರಿದ್ದರು. ಏಪ್ರಿಲ್ 9 ರಂದು ನಡೆದ ಯುಟಿ ಚುನಾವಣೆಯಲ್ಲಿ ಎನ್‌ಡಿಎ ಗೆದ್ದು ಅಧಿಕಾರ ಉಳಿಸಿಕೊಂಡಿತ್ತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಂಗಸ್ವಾಮಿ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸಿದ್ದರು (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net