ಮಣಿಪುರದಲ್ಲಿ ಹಿಂಸಾಚಾರಕ್ಕೆ ತಿರುಗಿದ ನಾಗಾಗಳ ಪ್ರತಿಭಟನೆ; ಅಶ್ರುವಾಯು ಪ್ರಯೋಗ, ನಾಲ್ವರಿಗೆ ಗಾಯ | Naga protest

ಘಟನೆಯ ಸ್ಥಳ
ಘಟನೆಯ ಸ್ಥಳ
Published on
ಇಂಫಾಲ್: ಮಣಿಪುರದಲ್ಲಿ ಆರು ನಾಗಾ ನಾಗರಿಕರನ್ನು ಅಪಹರಿಸಿ ಕೊಲೆ ಮಾಡಲಾದ ಘಟನೆಗೆ ಸಂಬಂಧಿಸಿದಂತೆ ಬಲಿಪಶುಗಳ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ನಾಗಾಗಳು(Naga protest) ನಡೆಸುತ್ತಿದ್ದ ಶಾಂತಿಯುತ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಶುಕ್ರವಾರ(ಆ. 21) ವರದಿಯಾಗಿದೆ.
ಗುರುವಾರ ಕಾಂಗ್ಲತೋಂಗ್ಬಿಯಲ್ಲಿ ಯುನೈಟೆಡ್ ನಾಗಾ ಕೌನ್ಸಿಲ್ (UNC) ಆಶ್ರಯದಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ಕಾರಣವಾಯಿತು. ಕ್ಷಿಪ್ರ ಕಾರ್ಯ ಪಡೆ ಮತ್ತು ಭದ್ರತಾ ಪಡೆಗಳು ಗುಂಪನ್ನು ಚದುರಿಸಲು ಅಶ್ರುವಾಯು ಸಿಡಿಸಿದವು. ಘಟನೆಯಲ್ಲಿ ನಾಲ್ವರು ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಇಂಫಾಲ್‌ನ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಪರಿಸ್ಥಿತಿ ಉದ್ವಿಗ್ನಗೊಂಡಿದ್ದರಿಂದ ಕಾಂಗ್ಲತೋಂಗ್ಬಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.
ಇನ್ನೂ ನಾಗಾ ವಿದ್ಯಾರ್ಥಿ ಒಕ್ಕೂಟ ಮತ್ತು ಲಿಯಾಂಗ್‌ಮೈ ನಾಗಾ ಮಂಡಳಿ ಶಾಂತಿಯುತ ನಾಗಾ ಪ್ರತಿಭಟನಾಕಾರರ ಮೇಲೆ ಅಶ್ರುವಾಯು ಪ್ರಯೋಗವನ್ನು ಖಂಡಿಸಿದವು. ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆ, ಗಾಯಗೊಂಡವರಿಗೆ ಸಾಕಷ್ಟು ವೈದ್ಯಕೀಯ ನೆರವು ಮತ್ತು ಬಂಧಿತ ಗ್ರಾಮಸ್ಥರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಅವರು ಒತ್ತಾಯಿಸಿವೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net