ನಾಗ್ಪುರ ಜಿಲ್ಲೆಯ ರೌಲ್ಗಾಂವ್‌ನಲ್ಲಿರುವ ಸ್ಫೋಟಕ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಪೋಟದ ಘಟನೆ ಅತ್ಯಂತ ದುರದೃಷ್ಟಕರ. ಘಟನೆ ಸಂಭವಿಸಿದಾಗಿನಿಂದಲೂ ನಾನು ಸ್ಥಳೀಯ ಆಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಈಗಾಗಲೇ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ತಲುಪಿದ್ದು, ರಕ್ಷಣಾ ಕಾರ್ಯಾಚರಣೆಗಳು ಚುರುಕುಗೊಂಡಿವೆ. ಈವರೆಗೂ ಸುಮಾರು 17 ಜನ ಪ್ರಾಣ ಕಳೆದುಕೊಂಡಿದ್ದು, 18 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ನಾಗ್ಪುರಕ್ಕೆ ಸ್ಥಳಾಂತರಿಸಲಾಗಿದ್ದು, ಬೇಗ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿಎಂ ಫಡ್ನವೀಸ್ ಭಾವುಕರಾಗಿದ್ದಾರೆ.