ಎನ್ಡಿಎ ಮೈತ್ರಿಕೂಟದ ಪ್ರಮುಖ ಪಾಲುದಾರ ಪಕ್ಷವಾಗಿ ಕೇಂದ್ರ ಸಂಪುಟದಲ್ಲಿ ಪ್ರಾತಿನಿಧ್ಯವನ್ನು ನಿರೀಕ್ಷಿಸುವುದು ಸಹಜ ಎಂದಿರುವ ಅವರು, ಈ ವಿಷಯದಲ್ಲಿ ಅಂತಿಮ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರೇ ತೆಗೆದುಕೊಳ್ಳಬೇಕಾಗುತ್ತದೆ ಮತ್ತು ಅದಕ್ಕೆ ಪಾರ್ಥ್ ಪವಾರ್ ಹಾಗೂ ಎನ್ಸಿಪಿ ಅಧ್ಯಕ್ಷೆಯಾಗಿರುವ ಸುನೇತ್ರಾ ಪವಾರ್ ಅವರ ಒಪ್ಪಿಗೆಯೂ ಮುಖ್ಯವಾಗಿರುತ್ತದೆ ಎಂದು ಹೇಳಿದ್ದಾರೆ. ಪಕ್ಷದೊಳಗೆ ಕೆಲವು ಆಂತರಿಕ ಭಿನ್ನಾಭಿಪ್ರಾಯಗಳ ವದಂತಿಗಳು ಕೇಳಿಬರುತ್ತಿದ್ದರೂ, ಹಿರಿಯ ನಾಯಕರಾದ ಪ್ರಫುಲ್ ಪಟೇಲ್ ಮತ್ತು ಸುನಿಲ್ ತಟ್ಕರೆ ಇವುಗಳನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ.