ಮುಂದಿನ ಪಶ್ಚಿಮ ಬಂಗಾಳ, ತಮಿಳುನಾಡು ಚುನಾವಣೆಯಲ್ಲಿ ಎನ್​ಡಿಎ ಗೆದ್ದು ಸರ್ಕಾರ ರಚಿಸಲಿದೆ: ಅಮಿತ್ ಶಾ | Amit Shah

ಕೇಂದ್ರ ಗೃಹಸಚಿವ ಅಮಿತ್ ಶಾ
ಕೇಂದ್ರ ಗೃಹಸಚಿವ ಅಮಿತ್ ಶಾ
Published on
ಚೆನ್ನೈ: ತಮಿಳುನಾಡು ಪ್ರವಾಸದಲ್ಲಿರುವ ಕೇಂದ್ರ ಗೃಹಸಚಿವ ಅಮಿತ್ ಶಾ, ಕೆಲವೇ ತಿಂಗಳಲ್ಲಿ ನಡೆಯಲಿರುವ ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ಎರಡೂ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಎನ್​ಡಿಎ ಮೈತ್ರಿಕೂಟ ಭಾರಿ ಬಹುಮತದಿಂದ ಗೆದ್ದು ಸರ್ಕಾರ ರಚಿಸಲಿದೆ ಎಂದು ಹೇಳಿದ್ದಾರೆ.
ಇಂದು(ಜ. 04) ಪುದುಕ್ಕೊಟ್ಟೈನಲ್ಲಿ ಆಯೋಜಿಸಲಾಗಿದ್ದ ಸಭೆಯನ್ನುದ್ದೇಶಿಸಿ ಮಾತನಾಡಿರುವ ಅಮಿತ್ ಶಾ, ಈ ಬಾರಿ ತಮಿಳುನಾಡಿನಲ್ಲಿ ಕುಟುಂಬ ಆಡಳಿತವನ್ನು ಕೊನೆಗೊಳಿಸುವ ಸಮಯ ಬಂದಿದೆ. ಮೊದಲು ಕರುಣಾನಿಧಿ, ನಂತರ ಸ್ಟಾಲಿನ್, ಈಗ ಉದಯನಿಧಿ ಸಿಎಂ ಮಾಡುವ ಕನಸು ಕಾಣುತ್ತಿದ್ದಾರೆ. ಆದರೆ ಆ ಕನಸು ನನಸಾಗಲ್ಲ ಎಂದು ಕಿಡಿಕಾರಿದ್ದಾರೆ.
ಡಿಎಂಕೆ ಸರ್ಕಾರ ರಾಜ್ಯದ ಜನರ ಕಲ್ಯಾಣಕ್ಕಿಂತ ಕುಟುಂಬ ಆಡಳಿತಕ್ಕೆ ಒತ್ತು ನೀಡುತ್ತಿದೆ. ರಾಜ್ಯದ ಸಮಸ್ಯೆಗಳನ್ನು ನಿರ್ಲಕ್ಷ್ಯ ವಹಿಸಿ ಕೇವಲ ಉದಯನಿಧಿಯನ್ನು ಸಿಎಂ ಮಾಡಲು ಡಿಎಂಕೆ ಕೆಲಸ ಮಾಡ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net