ಪ್ರಸಕ್ತ ವರ್ಷ ದೇಶಾದ್ಯಂತ ವೈದ್ಯಕೀಯ, ಡೆಂಟಲ್, ಆಯುಷ್ ಮತ್ತು ಇತರೆ ಮೈತ್ರಿಕೂಟದ ಪದವಿ ಕೋರ್ಸ್‌ಗಳ ಪ್ರವೇಶಕ್ಕಾಗಿ ಒಟ್ಟು 11.21 ಲಕ್ಷ ಅಭ್ಯರ್ಥಿಗಳು ಉತ್ತೀರ್ಣರಾಗಿದ್ದು, ಈ ಬಾರಿಯೂ ಮಹಿಳಾ ಮಣಿಗಳೇ ಮೇಲುಗೈ ಸಾಧಿಸಿದ್ದಾರೆ. ಕಳೆದ ಜೂನ್ 21ರಂದು ಭಾರತದ 551 ನಗರಗಳು ಹಾಗೂ ವಿದೇಶದ 14 ನಗರಗಳು ಸೇರಿ ಒಟ್ಟು 5,440 ಪರೀಕ್ಷಾ ಕೇಂದ್ರಗಳಲ್ಲಿ ಅಧಿಕಾರಿಗಳ ಸರ್ಪಗಾವಲಿನಲ್ಲಿ ಮರುಪರೀಕ್ಷೆಯನ್ನು ನಡೆಸಲಾಯಿತು. ಒಟ್ಟು 13 ಭಾಷೆಗಳಲ್ಲಿ ನಡೆದಿದ್ದ ಈ ಪರೀಕ್ಷೆಗೆ ಸುಮಾರು 20 ಲಕ್ಷ ಅಭ್ಯರ್ಥಿಗಳು ಹಾಜರಾಗಿದ್ದರು.