ಇನ್ನೂ ಭಾರತದ 551 ನಗರಗಳ 5,440 ಕೇಂದ್ರಗಳಲ್ಲಿ ಮತ್ತು ವಿದೇಶದಲ್ಲಿರುವ 14 ಕೇಂದ್ರಗಳಲ್ಲಿ ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ಇಂಗ್ಲಿಷ್ ಮತ್ತು 12 ಭಾರತೀಯ ಭಾಷೆಗಳಲ್ಲಿ ನಡೆಸಲು ಸಮಗ್ರ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆಯು 95,000ಕ್ಕೂ ಹೆಚ್ಚು ಪರೀಕ್ಷಾ ಕೊಠಡಿಗಳಲ್ಲಿ ನಡೆಯಲಿದ್ದು, ಪ್ರತಿಯೊಂದರಲ್ಲೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ಅದು ಹೇಳಿದೆ.