ಈ ಕುರಿತು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಆಂಧ್ರಪ್ರದೇಶ, ರಾಜಸ್ಥಾನ ಸೇರಿ ದೇಶದ ಹಲವು ರಾಜ್ಯಗಳಲ್ಲಿ ಖಾಸಗಿ ಬಸ್ ಅಪಘಾತಗಳಲ್ಲಿ ಹಲವು ಜನರು ತಮ್ಮ ಪ್ರಾಣಗಳನ್ನು ಕಳೆದುಕೊಂಡಿದ್ದಾರೆ. ಬಸ್‌ಗಳಲ್ಲಿ ಸುರಕ್ಷತಾ ನಿಯಮಗಳನ್ನು ಪಾಲಿಸದ ಕಾರಣ ಅಪಘಾತಗಳು ಸಂಭವಿಸಿವೆ ಎಂದು ಹೇಳಿದ್ದಾರೆ.