ಈ ಪ್ರಕರಣ ರಾಜ್ಯ ಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕೇತನ್ ತಂದೆಯನ್ನು ಭೇಟಿ ಮಾಡಿ ಸರ್ಕಾರದಿಂದ ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದ್ದಾರೆ. ಕುಟುಂಬದ ಮನವಿಯನ್ನು ಸರ್ಕಾರ ಒಪ್ಪಿಕೊಂಡಿದ್ದು, ಪ್ರಕರಣವನ್ನು ಫಾಸ್ಟ್ ಟ್ರ್ಯಾಕ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲು ನಿರ್ಧರಿಸಲಾಗಿದೆ. ವಿಶೇಷ ಸರ್ಕಾರಿ ಅಭಿಯೋಜಕರಾಗಿ ಉಜ್ವಲ್ ನಿಕಂ ಅವರನ್ನು ನೇಮಕ ಮಾಡಲಾಗಿದೆ. "ಇದು ಅತ್ಯಂತ ಆಘಾತಕಾರಿ ಘಟನೆ. ಉತ್ತಮ ಕುಟುಂಬಗಳ ವಿದ್ಯಾವಂತ ಯುವಕ-ಯುವತಿಯರಲ್ಲಿ ಇಂತಹ ಅಪರಾಧ ಮನೋಭಾವ ಏಕೆ ಬೆಳೆಯುತ್ತಿದೆ ಎಂಬುದರ ಬಗ್ಗೆ ಸಮಾಜ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಇದು ಕೇವಲ ಅಪರಾಧ ಪ್ರಕರಣವಲ್ಲ, ಸಾಮಾಜಿಕ ಆಯಾಮವೂ ಇದೆ," ಎಂದು ಫಡ್ನವೀಸ್ ಹೇಳಿದ್ದಾರೆ,(ಏಜೆನ್ಸೀಸ್).