ಎರಡು ದಶಕಗಳಿಗೂ ಹೆಚ್ಚು ಕಾಲ, ನೀವು ನಿರಂತರವಾಗಿ ನನ್ನ ಮೇಲೆ ನಿಮ್ಮ ನಂಬಿಕೆ ಮತ್ತು ಬೆಂಬಲವನ್ನು ಇರಿಸಿದ್ದೀರಿ. ಆ ನಂಬಿಕೆಯ ಬಲದ ಮೇಲೆ ನಾವು ಬಿಹಾರ ಮತ್ತು ನಿಮ್ಮೆಲ್ಲರಿಗೂ ಸಂಪೂರ್ಣ ಸಮರ್ಪಣಾಭಾವದಿಂದ ಸೇವೆ ಸಲ್ಲಿಸಿದ್ದೇನೆ ಎಂದು ನಿತೀಶ್ ಕುಮಾರ್ ಬರೆದುಕೊಂಡಿದ್ದಾರೆ. ನನ್ನ ಸಂಸದೀಯ ಪ್ರಯಾಣದ ಆರಂಭದಿಂದಲೂ, ಬಿಹಾರ ವಿಧಾನಸಭೆಯ ಎರಡೂ ಸದನಗಳ ಮತ್ತು ಸಂಸತ್ತಿನ ಎರಡೂ ಸದನಗಳ ಸದಸ್ಯನಾಗಬೇಕೆಂಬ ಬಯಕೆ ಮನಸ್ಸಲ್ಲಿ ಮನೆ ಮಾಡಿತ್ತು, ಅದಕ್ಕನುಗುಣವಾಗಿ ಈ ಬಾರಿಯ ರಾಜ್ಯಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಹೇಳಿದರು(ಏಜೆನ್ಸೀಸ್).