ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಚುನಾವಣಾಧಿಕಾರಿ ಕೆ. ಲಕ್ಷ್ಮಣ್ ಅವರಿಗೆ ನಿತಿನ್ ನಬಿನ್ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಕೇಂದ್ರ ಗೃಹಸಚಿವ ಅಮಿತ್ ಶಾ, ರಾಜನಾಥ್ ಸಿಂಗ್, ಹಾಲಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ನಿತಿನ್ ಗಡ್ಕರಿ, ಕಿರಣ್ ರಿಜಿಜು ಸೇರಿ ಹಲವು ನಾಯಕರು ಸಾಥ್ ನೀಡಿದ್ದಾರೆ. ಪ್ರಧಾನಿ ಮೋದಿ ಸೇರಿ ಎಲ್ಲರೂ ಅವರ ಉಮೇದುವಾರಿಕೆಯನ್ನು ಬೆಂಬಲಿಸಿದ್ದಾರೆ.