10ನೇ ಬಾರಿಗೆ ಬಿಹಾರದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್​ ಕುಮಾರ್​

Nitish Kumar
Nitish Kumar
Published on
ಬಿಹಾರ: 10ನೇ ಬಾರಿಗೆ ಬಿಹಾರ ರಾಜ್ಯದ ಮುಖ್ಯಮಂತ್ರಿಯಾಗಿ ನಿತೀಶ್​ ಕುಮಾರ್​ ಗುರುವಾರ(ನ.20) ಪ್ರಮಾಣವಚನ ಸ್ವೀಕಾರ ಮಾಡಿದರು.
ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ದಾಖಲೆಯ ಹತ್ತನೇ ಬಾರಿಗೆ ಬಿಹಾರದ ಸಿಎಂ ಗದ್ದುಗೇರಿದರು. ಬಿಜೆಪಿಯಿಂದ ಸಾಮ್ರಾಟ್ ಚೌಧರಿ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಪ್ರಮಾಣ ವಚನ ಬೋಧಿಸಿದರು.
ವಿಜಯ್ ಕುಮಾರ್ ಚೌಧರಿ, ಬಿಜೇಂದ್ರ ಪ್ರಸಾದ್ ಯಾದವ್, ಶ್ರವೋನ್ ಕುಮಾರ್, ಮಂಗಲ್ ಪಾಂಡೆ, ಡಾ ದಿಲೀಪ್ ಜೈಸ್ವಾಲ್, ಅಶೋಕ್ ಚೌಧರಿ ಬಿಹಾರದ ಸಚಿವರಾಗಿ ಗಾಂಧಿ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
2025 ರ ಬಿಹಾರ ಚುನಾವಣೆಯಲ್ಲಿ ಜೆಡಿ(ಯು) ಮತ್ತು ಬಿಜೆಪಿ ನೇತೃತ್ವದ ಎನ್‌ಡಿಎ 242 ವಿಧಾನಸಭಾ ಸ್ಥಾನಗಳಲ್ಲಿ 202 ಸ್ಥಾನಗಳನ್ನು ಗೆದ್ದು ಬಹುಮತ ಗಳಿಸಿತು. ಬಿಜೆಪಿ 89 ಸ್ಥಾನಗಳನ್ನು ಗಳಿಸುವ ಮೂಲಕ ಏಕೈಕ ಅತಿದೊಡ್ಡ ಪಕ್ಷವಾಯಿತು, ಜೆಡಿ(ಯು) 85, ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) 19, ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಐದು ಮತ್ತು ರಾಷ್ಟ್ರೀಯ ಲೋಕ ಮೋರ್ಚಾ ನಾಲ್ಕು ಸ್ಥಾನಗಳನ್ನು ಗೆದ್ದಿದೆ.
ಇನ್ನು ಬೃಹತ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಮತ್ತು ಎನ್‌ಡಿಎ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಸಹ ಸಮಾರಂಭದಲ್ಲಿ ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net